7th Pay Commission: ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್-2024.

7th Pay Commission: ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್-2024.

7th Pay Commission:

 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.

 

7th Pay Commission: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕರ್ನಾಟಕ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಒಪ್ಪಿಗೆ ನೀಡಿದೆ. ಆಗಸ್ಟ್‌ ತಿಂಗಳಿನಿಂದಲೇ ಜಾರಿಗೆ ಬರುವಂತೆ ಸರ್ಕಾರಿ ನೌಕರರ ವೇತನ, ಭತ್ಯೆ ಏರಿಕೆಯಾಗಲಿದೆ. ಈಗ ಸರ್ಕಾರ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ವೈದ್ಯಕೀಯ ಭತ್ಯೆಗಳ ದರಗಳನ್ನು ಪರಿಷ್ಕರಣೆ ಮಾಡಿ ಆದೇಶವನ್ನು ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ವೈದ್ಯಕೀಯ ಭತ್ಯೆಗಳ ದರಗಳ ಪರಿಷ್ಕರಣೆ ಎಂಬ ವಿಷಯ ಒಳಗೊಂಡಿದೆ.

ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ ದಿನಾಂಕ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತೃತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ.

ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತೃತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ.

ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶವನ್ನು ಹೊರಡಿಸಿದೆ ಎಂದು ಹೇಳಿದೆ.

ಸರ್ಕಾರದ ಆದೇಶವೇನು?:

ಗ್ರೂಪ್-‘ಸಿ’ ಮತ್ತು ಗ್ರೂಪ್-‘ಡಿ’ ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ ರೂ. 200 ಗಳಿಂದ ಮಾಸಿಕ ರೂ. 500ಗಳಿಗೆ 1ನೇ ಆಗಸ್ಟ್ 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿದೆ.

ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆ.ಎ.ಎಸ್.ಎಸ್) ಸೌಲಭ್ಯ ಅನುಷ್ಠಾನಗೊಳ್ಳುವವರೆಗೆ ಈ ವೈದ್ಯಕೀಯ ಸೌಲಭ್ಯವು ಲಭ್ಯವಿರುತ್ತದೆ ಎಂದು ಆದೇಶ ತಿಳಿಸಿದೆ.

ನಗದುರಹಿತ ವೈದ್ಯಕೀಯ ಸೌಲಭ್ಯ ಯೋಜನೆಯು ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶವು ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ ಮತ್ತು ನಗದುರಹಿತ (ಕೆ.ಎ.ಎಸ್.ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರನು ಈ ಸೌಲಭ್ಯವನ್ನು ಪಡೆಯಲು ಅರ್ಹನಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಭತ್ಯೆಯನ್ನು ಕ್ರಮಬದ್ಧಗೊಳಿಸಲು ವಿಧಿಸಿರುವ ಇತರೆ ಷರತ್ತುಗಳು ಮುಂದುವರೆದು ಅನ್ವಯಿಸುತ್ತವೆ ಎಂದು ಆದೇಶ ಹೇಳಿದೆ.

ಕರ್ನಾಟಕದ ಸರ್ಕಾರಿ ನೌಕರರು ರಾಜ್ಯ ಸರ್ಕಾರ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ಜಾರಿಗೊಳಿಸಬೇಕು ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಯೋಜನೆ ಇದಾಗಿದೆ. ಈ ಯೋಜನೆಯು ನಗದುರಹಿತ, ತಡೆರಹಿತ, ಸಮಗ್ರ ಆರೋಗ್ಯ ರಕ್ಷಣಾ ಯೋಜನೆಯಾಗಿದ್ದು, ಇದು ಅಲೋಪತಿ ಮತ್ತು ಆಯುಷ್ ವೈದ್ಯಕೀಯ ವ್ಯವಸ್ಥೆಗಳೆರಡನ್ನೂ ಒಳಗೊಳ್ಳುತ್ತದೆ.

ಯೋಜನೆಯ ಸೌಲಭ್ಯಗಳನ್ನು ಸಾರ್ವಜನಿಕ ಮತ್ತು ಎಂಪನೆಲ್ ಖಾಸಗಿ ಆರೋಗ್ಯ ಸಂಸ್ಥೆಗಳ ಮೂಲಕ ವಿಸ್ತರಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆ ಜಾರಿಗೆ ಬರುವ ತನಕ ವೈದ್ಯಕೀಯ ಭತ್ಯೆಗಳನ್ನು ಹೆಚ್ಚಳ ಮಾಡಲಾಗಿದೆ.

ಧನ್ಯವಾದಗಳು….

WhatsApp Group Join Now
Telegram Group Join Now

Leave a Comment