ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ(DA) ಶೇಕಡ 2 ರಷ್ಟು ಹೆಚ್ಚಳಕ್ಕೆ ಒತ್ತಾಯ.
DA: ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ (DA) ಶೇಕಡಾ 2 ರಷ್ಟು ಹೆಚ್ಚಳ ಮಾಡಿದೆ. ಈ ಹೆಚ್ಚಳವು ಜನವರಿ 1, 2025 ರಿಂದ ಜಾರಿಗೆ ಬಂದಿದ್ದು, ಇದರೊಂದಿಗೆ DA ದರವು ಈ ಹಿಂದಿನ ಶೇಕಡಾ 53 ರಿಂದ ಶೇಕಡಾ 55 ಕ್ಕೆ ಏರಿಕೆಯಾಗಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸರ್ಕಾರಿ ನೌಕರರ ತುಟ್ಟಿ ಭತ್ಯೆ(DA) ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರು ಕೂಡ ತುಟ್ಟಿ ಭತ್ಯೆ ಏರಿಕೆಗೆ ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಈ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರು ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರಿವೂ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದೆ. ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರವೂ ಸರ್ಕಾರಿ ನೌಕರರ ತುಟ್ಟಿ ಭತ್ಯೆ(DA) ಮಂಜೂರು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನ ಮಂಜೂರು ಮಾಡಿರುತ್ತದೆ.
ಇನ್ನೂ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಜನವರಿ 1 ,2025 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇಕಡ 2 ರಷ್ಟು ತುಟ್ಟಿ ಭತ್ಯೆ ಮಂಜೂರು ಮಾಡಿದ್ದು, ಅದರಂತೆ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2025 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇಕಡ 2 ರಷ್ಟು ತುಟ್ಟಿ ಭತ್ಯೆಯನ್ನು ಮಂಜೂರು ಮಾಡಬೇಕೆಂದು ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಮನವಿ ಮಾಡಿದ್ದಾರೆ.
ಶೇ 2ರಷ್ಟು ತುಟ್ಟಿ ಭತ್ಯೆ(DA) ಹೆಚ್ಚಳಕ್ಕೆ ಕೇಂದ್ರ ಸರ್ಕಾರ.
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ (DA) ಶೇಕಡಾ 2 ರಷ್ಟು ಹೆಚ್ಚಳ ಮಾಡಿದೆ. ಜನವರಿ 1, 2025 ರಿಂದ ಜಾರಿಗೆ ಬಂದಿದ್ದು, ಇದರೊಂದಿಗೆ ಡಿಎ ದರವು ಈ ಹಿಂದಿನ ಶೇಕಡಾ 53 ರಿಂದ ಶೇಕಡಾ 55 ಕ್ಕೆ ಏರಿಕೆಯಾಗಿದೆ. ಈ ಹೆಚ್ಚಳವನ್ನು ಉದ್ಯೋಗಿಗಳ ಮೂಲ ವೇತನ ಅಥವಾ ಪಿಂಚಣಿದಾರರ ಮೂಲ ಪಿಂಚಣಿಗೆ ಅನುಗುಣವಾಗಿ ಲೆಕ್ಕ ಹಾಕಲಾಗುತ್ತದೆ. ಈ ನಿರ್ಧಾರವು ಸುಮಾರು 48.66 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 66.55 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ತರುವುದರ ಜೊತೆಗೆ ಸರ್ಕಾರಕ್ಕೆ ವಾರ್ಷಿಕವಾಗಿ ಸುಮಾರು 6,614.04 ಕೋಟಿ ರೂಪಾಯಿಗಳ ಹೆಚ್ಚುವರಿ ಆರ್ಥಿಕ ಹೊರೆಯನ್ನು ತರುತ್ತದೆ.
ಶೇಕಡಾ 2 ರ ಹೆಚ್ಚಳವು ಕಳೆದ 7 ವರ್ಷಗಳಲ್ಲಿ ಅತ್ಯಂತ ಕಡಿಮೆ ಎಂದು ಕೆಲವಾರು ವರದಿಗಳು ಸೂಚಿಸಿವೆ. ಸಾಮಾನ್ಯವಾಗಿ DA ಹೆಚ್ಚಳವು ಹಣದುಬ್ಬರದ ಪ್ರಮಾಣಕ್ಕೆ ತಕ್ಕಂತೆ ಶೇಕಡಾ 3-4 ರಷ್ಟು ಇರುತ್ತದೆ. ಈ ಬಾರಿ ಕಡಿಮೆ ಹೆಚ್ಚಳವು ಆರ್ಥಿಕ ನಿರ್ಬಂಧಗಳು ಹಾಗೂ ಹಣದುಬ್ಬರದ ತೀವ್ರತೆ ಕಡಿಮೆಯಾಗಿರುವುದನ್ನು ಪ್ರತಿಬಿಂಬಿಸಬಹುದು.