SSLC EXAM -3:ಎಸ್.ಎಸ್.ಎಲ್.ಸಿ ಪರೀಕ್ಷೆ-3ಕ್ಕೆ(SSLC EXAM -3) ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಪ್ರಕಟಿಸಲಾಗಿದೆ.

SSLC EXAM -3:ಎಸ್.ಎಸ್.ಎಲ್.ಸಿ ಪರೀಕ್ಷೆ-3ಕ್ಕೆ(SSLC EXAM -3) ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಪ್ರಕಟಿಸಲಾಗಿದೆ.

SSLC EXAM -3

SSLC EXAM -3:2025ರ ಜುಲೈ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-3ಕ್ಕೆ ಹಾಜರಾಗುತ್ತಿರುವ 2025ರ ಪರೀಕ್ಷೆ-1 ಮತ್ತು ಪರೀಕ್ಷೆ-2ಕ್ಕೆ ಗೈರು ಹಾಜರಾದ / ಪೂರ್ಣಗೊಳಿಸಲಾಗಿಲ್ಲದ [Not Completed) / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ:26.06.2025 ರಂದು ಅಪರಾಹ್ನ ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ಲ್ಲಿ ಅಪ್‌ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು. ಒಂದು ವೇಳೆ ಏನಾದರೂ ವ್ಯತ್ಯಯಗಳು ಕಂಡು ಬಂದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ಡೌನ್‌ ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ / ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಿಕೊಡುವುದು.

GOVT ORDER LINK – CLICK HERE

ಎಸ್.ಎಸ್.ಎಲ್.ಸಿ ಪರೀಕ್ಷೆ-3ಕ್ಕೆ(SSLC EXAM -3) ಪ್ರಮುಖ ಸೂಚನೆಗಳು.

1. ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಯಾದಿಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ. ಇದರಿಂದ ವಿದ್ಯಾರ್ಥಿಗೆ ಆಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಳಿಯು ಇದರ ಜವಾಬ್ದಾರಿ ಹೊರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

2. ಶಾಲಾ ಲಾಗಿನ್‌ನಿಂದ ಮುದ್ರಿಸಿಕೊಂಡಿರುವ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳಿಗೆ ಕೂಡಲೇ ವಿತರಿಸುವುದು ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು.

3. ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಾಸಾದ ವಿಷಯಕ್ಕೆ ಪರೀಕ್ಷೆ ಬರೆಯುವಂತೆ ಮುದ್ರಣವಾಗಿದ್ದಲ್ಲಿ, ಪಾಸಾದ ಬಗ್ಗೆ ಚುಕ್ಕೆ ಗುರುತಿಲ್ಲದ ಫಲಿತಾಂಶ ಪಟ್ಟಿಯನ್ನು ಮುಖ್ಯಶಿಕ್ಷಕರು ದೃಢೀಕರಿಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳಿಗೆ ಕಳುಹಿಸುವುದು.

4. ಪ್ರವೇಶ ಪತ್ರವನ್ನು ಪಡೆಯುವಲ್ಲಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸುವುದು. ಜುಲೈ-2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಅಂತಿಮ ಪ್ರವೇಶ ಪತ್ರಗಳಲ್ಲಿ ತಿದ್ದುಪಡಿಗಳಿದಲ್ಲಿ ಪ್ರಸ್ತಾವನೆಯನ್ನು ರವಾನಿಸಬೇಕಾದ ಮಂಡಳಿಯ ಅಧಿಕಾರಿಗಳ ಹೆಸರು ಮತ್ತು ಸಂಬಂಧಿಸಿದ ಜಿಲ್ಲೆಗಳ ಮಾಹಿತಿ.

WhatsApp Group Join Now
Telegram Group Join Now