SSLC: 2025-26 ಶೈಕ್ಷಣಿಕ SSLC ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಶುಭ ಸುದ್ದಿ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

SSLC: 2025-26 ಶೈಕ್ಷಣಿಕ SSLC ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಶುಭ ಸುದ್ದಿ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

SSLC

SSLC: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ SSLC (ಎಸ್‌ಎಸ್‌ಎಲ್‌ಸಿ) ಕಾಯ್ದೆಗೆ ಕರಡು ತಿದ್ದುಪಡಿ ಪ್ರಕಟಿಸಿದ್ದು, 625 ಅಂಕಗಳಿಗೆ ಕನಿಷ್ಠ 206 ಅಂಕಗಳು ಅಂದರೆ ಶೇ.33ರಷ್ಟು ಅಂಕಗಳನ್ನು ಗಳಿಸಿದರೆ ಉತ್ತೀರ್ಣ ಎಂಬ ನಿಯಮ ಅನುಷ್ಠಾನಕ್ಕೆ ಮುಂದಾಗಿದೆ. ಕರಡು ತಿದ್ದುಪಡಿ ನಿಯಮಗಳನ್ನು ಗುರುವಾರ ಪ್ರಕಟಿಸಿರುವ ಇಲಾಖೆಯು ಮುಂದಿನ 15 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸಬೇಕು. ಆಕ್ಷೇಪಣೆ ಬಾರದಿದ್ದಲ್ಲಿ ನಿಯಮ ಜಾರಿಗೊಳ್ಳಲಿದೆ ಎಂದು ತಿಳಿಸಿದೆ. ಈ ಮೊದಲು ಅಭ್ಯರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಶೇ.35 ರಷ್ಟು ಅಂಕ ಗಳಿಸುವುದು ಕಡ್ಡಾಯವಾಗಿತ್ತು. ಆದರೆ ಈ ಹಿಂದೆ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕನ್ನಡ ಅಥವಾ ಪ್ರಥಮ ಭಾಷೆಗೆ 125 ಅಂಕಗಳ ಬದಲಾಗಿ 100 ಅಂಕಗಳಿಗೆ ಇಳಿಸುವ ಪ್ರಸ್ತಾವವನ್ನು ಕರಡು ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ತಿಳಿದುಬಂದಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ಕರ್ನಾಟಕ ಸರ್ಕಾರದ ಅನುಮೋದನೆ ಮೇರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೊದಲ ನಿಯಮಾವಳಿಗಳು, 1966ಗೆ ಕೆಳಗಿನಂತೆ ಕರಡು ತಿದ್ದುಪಡಿ ನಿಯಮಗಳನ್ನು ಪ್ರಕಟಿಸಲಾಗಿರುತ್ತದೆ. ಇದರಿಂದ ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ಮಂಡಳಿಗೆ ಸ್ವೀಕೃತವಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ಮಂಡಳಿಯು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 3 ನೇ ಮಹಡಿ, 6 ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ಸಲ್ಲಿಸಬಹುದು.

Govt Order – CLICK HERE

SSLC ಕರಡು ನಿಯಮಗಳು.

1. ಶೀರ್ಷಿಕೆ ಮತ್ತು ಪ್ರಾರಂಭ. ಈ ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025 ಎಂದು ಕರೆಯತಕ್ಕದ್ದು.
2. ಅನುಬಂಧ III ರ ತಿದ್ದುಪಡಿ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಾವಳಿಗಳು, 1966, ಅನುಬಂಧ III ರಲ್ಲಿ-
ನಿಯಮ 16 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ, ಈ ಕೆಳಗಿನಂತೆ ಪ್ರತಿಯೋಜಿಸತಕ್ಕದ್ದು,
“16. ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಸರಾಸರಿ 33% ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.”:

WhatsApp Group Join Now
Telegram Group Join Now