ಅಂಗನವಾಡಿ : ಖಾಲಿ ಇರುವ 277 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಅಂಗನವಾಡಿ : ಖಾಲಿ ಇರುವ 277 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಅಂಗನವಾಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 277 ಅಂಗನವಾಡಿ ವರ್ಕರ್ (ಕಾರ್ಯಕರ್ತೆ) ಮತ್ತು ಹೆಲ್ಡರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ. ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯ ರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್ 10.

• Notification – CLICK HERE

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ.

• ಅಂಗನವಾಡಿ ವರ್ಕರ್-56 ಹುದ್ದೆಗಳು
• ಅಂಗನವಾಡಿ ಹೆಲರ್-221 ಹುದ್ದೆಗಳು

ವಯೋಮಿತಿ.

ಅಧಿಸೂಚನೆ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆವಿಧಾನ.

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು  ಅಂಕ ಅಂಕ : ಮತ್ತು ಮೆರಿಟ್ ಪಟ್ಟಿ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

• Read more… ಕರ್ನಾಟಕ ಸರ್ಕಾರಿ ನೌಕರರ ಬಡ್ತಿಗೆ ಹೊಸ ನಿಯಮ ಜಾರಿ: ಈ ಕೋರ್ಸ್‌ ಪೂರ್ಣಗೊಳಿಸುವುದು ಕಡ್ಡಾಯವೆಂದ ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಅರ್ಜಿ ಸಲ್ಲಿಸುವ ವಿಧಾನ.

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ 2: kamemakaone.kar.nic ಭೇಟಿ ನೀಡಿ, ಅಂಗನವಾಡಿ ವರ್ಕರ್/ಹೆಲ್ಪರ್ ಹುದ್ದೆಗಳ ಪೈಕಿ ಒಂದನ್ನು ಆಯ್ಕೆ ಮಾಡಿ. ಅಲ್ಲಿರುವ ಅರ್ಜಿಯನ್ನು ಭರ್ತಿ ಮಾಡಿ.

ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರ್ / ಉಪ ತಹಶೀಲ್ದಾರ್ ಬಳಿಯಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಸಂಪರ್ಕ ಸಂಖ್ಯೆಗಳು

08256-295134 ( ಬೆಳ್ತಂಗಡಿ)
08255-298562 (ಬಂಟ್ವಾಳ)
0824-2263199 (ಮಂಗಳೂರು ಗ್ರಾಮಾಂತರ ) 
0824-2959809 (ಮಂಗಳೂರು ನಗರ )
08251-298788 (ಪುತ್ತೂರು)
7795581349 (ಸುಳ್ಯ)
08255-238080 (ವಿಟ್ಲ)

WhatsApp Group Join Now
Telegram Group Join Now