ತುಟ್ಟಿ ಭತ್ಯೆ:ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ತುಟ್ಟಿ ಭತ್ಯೆ ಶೇ.2ರಷ್ಟು ಹೆಚ್ಚಳ, ಪರಿಷ್ಕೃತ ವೇತನ ಶ್ರೇಣಿ .

ತುಟ್ಟಿ ಭತ್ಯೆ:ಕೇಂದ್ರ ಸರ್ಕಾರಿ ನೌಕರರ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳವಾಗಿದೆ. ರಾಜ್ಯ ಸರ್ಕಾರವು ತನ್ನ ನೌಕರರಿಗೆ ಶೇ.2ರಷ್ಟು ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿ ದೀಪಾವಳಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ.12.25ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.14.25ಕ್ಕೆ ಹೆಚ್ಚಿಸಿ ಆರ್ಥಿಕ ಇಲಾಖೆಯ (ಸೇವೆಗಳು-2) ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಬುಧವಾರ ಆದೇಶಿಸಿದ್ದು, ಇದು 2025ರ ಜುಲೈ 1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಜು.1ರಿಂದ ಅನ್ವಯಿಸಿ ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರಿ ನೌಕರರಿಗೂ ಶೇ.3ರಷ್ಟು ತುಟ್ಟಿಭತ್ಯೆ ನೀಡಬೇಕೆಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಕೋರಿದ್ದರು.

• Read more… JEE-NEET-CUET ಪರೀಕ್ಷೆಗಳಿಗೆ ಶಾಲೆಗಳಲ್ಲಿಯೇ ತರಬೇತಿಗೆ ಸಿದ್ಧತೆ.
