Aadhaar: ಕರ್ನಾಟಕದ 8 ಜಿಲ್ಲೆಗಳ ಆಧಾರ್ ಸೇವಾ ಕೇಂದ್ರಗಳಲ್ಲಿ ಉದ್ಯೋಗವಕಾಶ.
Aadhaar: ಕರ್ನಾಟಕದಲ್ಲಿ ಉದ್ಯೋಗವಕಾಶಗಳು ಸೃಷ್ಠಿ ಹಾಗುತ್ತಲೇ ಇವೆ. ಈದೀಗ ಕೇಂದ್ರ ಸರ್ಕಾರದ CNC ಅಡಿಯಲ್ಲಿ ಕರ್ನಾಟಕ ಆಧಾರ್ ಸೇವಾ ಕೇಂದ್ರದಲ್ಲಿ ಆಧಾರ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹಾಗಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಮಾಸಿಕ ಸಂಬಳ ಮತ್ತು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
ಈ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದೀಗ 8 ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿಯಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
• ಬಾಗಲಕೋಟೆ – 1
• ಬೆಳಗಾವಿ – 1
• ಚಿಕ್ಕಮಗಳೂರು -1
• ಗದಗ – 1
• ಕೊಪ್ಪಳ – 1
• ಉಡುಪಿ – 1
• ಉತ್ತರ ಕನ್ನಡ – 1
• ಯಾದಗಿರಿಯಲ್ಲಿ 1 ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC, ITI ಮತ್ತು ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಈಗಾಗಲೇ ಆಧಾರ್ ಸೂಪರ್ವೈಸರ್ ಆಗಿ ಒಂದು ವರ್ಷದ ಹುದ್ದೆ ಅನುಭವ ಹೊಂದಿರಬೇಕು. ಇನ್ನು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.