Agricultural Subsidy to Farmers of the State: ರಾಜ್ಯದ ರೈತರಿಗೆ ಕೃಷಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ! -2024.

Agricultural Subsidy to Farmers of the State: ರಾಜ್ಯದ ರೈತರಿಗೆ ಕೃಷಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ! -2024.

Agricultural Subsidy to Farmers of the State:  ರಾಜ್ಯದ ರೈತ  ವರ್ಗದವರಿಗೆ ಸರ್ಕಾರವು ಅನೇಕ ಸಹಾಯಧನ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ. ಕೃಷಿ ಇಲಾಖೆಯು ರೈತರು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

   ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಜಾರಿಗೆ ಬರಲು ರೆಡಿಯಾತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಕೃಷಿಹೊಂಡದ ಸುತ್ತ ತಂತಿ ಬೇಲಿ ಹಾಗೂ ಲಘು ನೀರಾವರಿ ಘಟಕಗಳನ್ನು ಸ್ಥಾಪಿಸಲು ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ ಯೋಜನೆ ಲಾಭ ಪಡೆಯಲು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ.

   ಆಸಕ್ತಿ ಇರುವ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ ಕಾಫಿ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ನೀಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

   ಧನ್ಯವಾದಗಳು…..

WhatsApp Group Join Now
Telegram Group Join Now