Aided- ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ -2024.

Aided- ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ -2024.

Aided-

Aided- ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರದ ಆದೇಶ ಸಂಖ್ಯೆ: ಇಡಿ 77 ಎಸ್‌ಇಪಿ 2007 (ಭಾಗ) ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ ( Aided-)ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07- 2008 ರ ನಂತರ ನಿಧನ, ನಿವೃತ್ತಿ, ರಾಜಿನಾಮೆ, ಸಕ್ಷಮ ಪ್ರಾಧಿಕಾರದಿಂದ ಅನುಮೋದಿತವಾದ ಬಡ್ತಿ ಮೂಲಕ ತೆರವಾದ ಮತ್ತು ಇತರ ಕಾರಣಗಳಿಂದ ತೆರವಾದ ಬೋಧಕ ಹುದ್ದೆಗಳನ್ನು ತುಂಬಲು ಷರತ್ತುಗಳಿಗೊಳಪಟ್ಟು ಆರ್ಥಿಕ ಮಿತವ್ಯಯ ಆದೇಶವನ್ನು ಸಡಿಲಿಸಿ, ಅನುಮತಿ ನೀಡಲಾಗಿತ್ತು.

ಮೇಲೆ ಓದಲಾದ ಕ್ರಮಾಂಕ (2) ರಲ್ಲಿ ಖಾಸಗಿ ಅನುದಾನಿತ ( Aided-)ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ,  ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಸೂಕ್ತ ಪ್ರಾಧಿಕಾರದ ಅನುಮೋದನೆ ಪಡೆದು ಬಡ್ತಿ ಹೊಂದಿರುವ ಹಾಗೂ ಇತರೆ ಕಾರಣಗಳಿಂದ ದಿನಾಂಕ:31.12.2012 ರವರೆಗೆ ಖಾಲಿಯಾದ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡು ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು ಹಾಗೂ 2:01.01.2013  31.12.2014 ở were 01.01.2015 Dow 31.12.2015 ರವರೆಗೆ ಖಾಲಿಯಾದ ಬೋಧಕ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡ ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು (ವೃತ್ತಿ / ಚಿತ್ರಕಲಾ / ಸಂಗೀತ ಹಾಗೂ ಮುಂತಾದ ವಿಶೇಷ ಶಿಕ್ಷಕರನ್ನು ಹೊರತುಪಡಿಸಿ) ಭರ್ತಿ ಮಾಡುವ ಷರತ್ತಿಗೊಳಪಟ್ಟು ಆರ್ಥಿಕ ಮಿತ್ಯವ್ಯಯ ಸಡಿಲಿಸಿ ಅನುಮತಿ ನೀಡಲಾಗಿತ್ತು.

ಮೇಲೆ ಓದಲಾದ ಕುಮಾಂಕ (3), (4) ಮತ್ತು (5) ರನ್ವಯ ರಾಜ್ಯದ ಖಾಸಗಿ ಅನುದಾನಿತ (   Aided-)ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಖಾಲಿ ಇರುವ ಬೋಧಕ ಹುದ್ದೆಗಳನ್ನು ಆರ್ಥಿಕ ಮಿತವ್ಯಯ ಸಡಿಲಿಸಿ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಮತ್ತು ಧಾರವಾಡ ಹಾಗೂ ನಿರ್ದೇಶಕರು [ಪ್ರೌಢ], ಬೆಂಗಳೂರು ರವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಅದರಂತೆ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 1994-95 ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟಿ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತಿಗಳಿಗೊಳಪಟ್ಟು ಭರ್ತಿ ಮಾಡಿಕೊಳ್ಳಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

   ಷರತ್ತುಗಳು

1. ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ 384 5-8/2013, 20: 09.04.2013 ರಲ್ಲಿನ బోశాల్ని ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.

2. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳವುದು.

3. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

4. 2016-17 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು.

5. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

6. ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು.

7. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಸಂಖ್ಯೆ: ಇಡಿ 16 టిపియు 2011, ದಿನಾಂಕ:30.09.2011 ಅನ್ನು ಹಿಂಪಡೆಯಲಾಗಿದ್ದು, ಹುದ್ದೆಗಳ ಅನುಮೋದನೆಗಾಗಿ ಸರ್ಕಾರಕ್ಕೆ, ಪ್ರಸ್ತಾವನೆಗಳನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ… Click 

WhatsApp Group Join Now
Telegram Group Join Now

3 thoughts on “Aided- ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ -2024.”

Leave a Comment