ಅಂಗನವಾಡಿ:ಖಾಲಿ ಇರುವ 61 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹಾಗೂ 177 ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ:ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ 61 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹಾಗೂ 177 ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಬ್ಯಾಡಗಿ-03, ಹಾನಗಲ್-13, ಹಾವೇರಿ-05, ಹಿರೇಕೆರೂರು-12, ರಾಣೇಬೆನ್ನೂರು-20, ಸವಣೂರು-04,ಶಿಗ್ಗಾಂವ್ -04 ಸೇರಿ 61 ಹುದ್ದೆಗಳಿಗೆ ಹಾಗೂ ಸಹಾಯಕಿಯರ ಬ್ಯಾಡಗಿ-17, ಹಾನಗಲ್-21, ಹಾವೇರಿ-29, ಹಿರೇಕೆರೂರು-27, ರಾಣೇಬೆನ್ನೂರು-34, ಸವಣೂರು-23, ಶಿಗ್ಗಾಂವ್-26 ಸೇರಿ 177 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಮೂಲಕ ಅರ್ಜಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿ.ಯು.ಸಿ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಕನಿಷ್ಠ 19 ವರ್ಷ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ದಿನಾಂಕ 17-11-2025 ರೊಳಗಾಗಿ ವೆಬ್ ಸೈಟ್ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂರ್ಪಸಬಹ್ಮದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
