Chardham Yatra:ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಚಾರ್‌ಧಾಮ್ ಯಾತ್ರೆ(Chardham Yatra) ಸರ್ಕಾರದಿಂದ 2.0000 ಸಹಾಯಧನಕ್ಕೆ ಅರ್ಜಿ ಆಹ್ವಾನ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Chardham Yatra:ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಚಾರ್‌ಧಾಮ್ ಯಾತ್ರೆ(Chardham Yatra) ಸರ್ಕಾರದಿಂದ 2.0000 ಸಹಾಯಧನಕ್ಕೆ ಅರ್ಜಿ ಆಹ್ವಾನ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Chardham Yatra

Chardham Yatra:2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.20,000/-ಗಳಂತೆ ಸರ್ಕಾರದ ಸಹಾಯಧನವನ್ನು ನೀಡುವ ಕುರಿತು ದಿನಾಂಕ: 15.07.2025ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಚಾರ್‌ಧಾಮ್ ಯಾತ್ರೆ(Chardham Yatra) ಯ ಅರ್ಹತೆಗಳು.

1. ಯಾತ್ರಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರತಕ್ಕದ್ದು.
2. 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
3. ಯಾತ್ರಾರ್ಥಿಯು ಕಡ್ಡಾಯವಾಗಿ, ಬದರೀನಾಥ್, ಕೇದಾರ್‌ನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ಕ್ಷೇತ್ರಗಳಿಗೆ ಭೇಟಿ ನೀಡಿರಬೇಕು.
4. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.11.2025 ಸಂಜೆ 4:00 ಗಂಟೆಯೊಳಗೆ.
5. ಅನುದಾನ ಲಭ್ಯತೆಗೆ ಅನುಗುಣವಾಗಿ ಸರ್ಕಾರದ ಮಾರ್ಗಸೂಚಿಯನ್ವಯ ಅನುದಾನವನ್ನು ವಿತರಿಸಲಾಗುವುದು.
6. ಯಾತ್ರಾರ್ಥಿಯು ಆನ್‌ಲೈನ್ ಮೂಲಕವೇ ಅರ್ಜಿಯನ್ನು https://sevasindhuservices.karnataka.gov.in ನಲ್ಲಿ ಸಲ್ಲಿಸಬೇಕಾಗಿರುತ್ತದೆ.

ಚಾರ್‌ಧಾಮ್ ಯಾತ್ರೆ(Chardham Yatra)ಯ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕಾದ ದಾಖಲೆಗಳು.

1. ಭಾವಚಿತ್ರ (ಪಾಸ್‌ಪೋರ್ಟ್ ಗಾತ್ರ)
2. ಆಧಾರ್ ಕಾರ್ಡ್ ಅನ್ನು ಎರಡೂ ಬದಿಗಳಲ್ಲಿ ಅಪ್‌ಲೋಡ್ ಮಾಡಬೇಕು.
3. ಚುನಾವಣಾ ಗುರುತಿನ ಚೀಟಿ/ರೇಷನ್ ಕಾರ್ಡ್
4. ಯಾತ್ರಾರ್ಥಿಯು ರೂ.100/-ಗಳ ಛಾಪಾ ಕಾಗದ (E-Stamp Paper) ದಲ್ಲಿ ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್‌ಲೋಡ್ ಮಾಡತಕ್ಕದ್ದು.
5. ಯಾತ್ರೆ ಕೈಗೊಳ್ಳುವ ಮುನ್ನ ಯಾತ್ರೆಗೆ ನೋಂದಾಯಿಸಿಕೊಂಡ ಪ್ರತಿ
6. ಯಾತ್ರೆ ಮುಗಿದ ನಂತರ ಉತ್ತರಖಂಡ್ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೀಡಲಾದ ಪ್ರಮಾಣ ಪತ್ರ (ಕಡ್ಡಾಯವಾಗಿ 4 ಧಾಮಗಳು ನಮೂದಾಗಿರತಕ್ಕದ್ದು).
7. ಯಾತ್ರಾರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಅವರ ಬ್ಯಾಂಕ್ ಖಾತೆಯು ಚಾಲ್ತಿಯಲ್ಲಿರಬೇಕು, ಸದರಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಮಾಡಿಸಿರತಕ್ಕದ್ದು. (ಸರ್ಕಾರದ ಮಾರ್ಗಸೂಚಿಯನ್ವಯ ಆಯಾಯಾ ವರ್ಷದ ಅನುದಾನವನ್ನು ಆಯಾಯಾ ವರ್ಷ ಪಾವತಿಸಲು ಅವಕಾಶವಿರುವುದರಿಂದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಮಾಡಿಸಿರತಕ್ಕದ್ದು. ನಿಗದಿತ ದಿನಾಂಕದೊಳಗೆ ಮಾಡಿಸದಿದ್ದಲ್ಲಿ ತಾವೇ ನೇರ ಜವಾಬ್ದಾರರು) ಆವಧಿ ಮುಗಿದ ನಂತರ ಸಹಾಯಧನ ಕೋರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

PDF DOWNLOAD – CLICK HERE

WhatsApp Group Join Now
Telegram Group Join Now