DCC BANK,ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ 85 ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಈಗಲೆ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಇಲ್ಲಿದೆ 2024-25.
DCC BANK,ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ 85 ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಈಗಲೆ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಇಲ್ಲಿದೆ 2024-25.
DCC BANK, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿಕ್ಕಮಗಳೂರು ಇದರಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ONLINE ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.chikkamagalurudccbank.com ನಲ್ಲಿ ನೀಡಿರುವ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೋರಿಯರ್ ಇತ್ಯಾದಿಗಳ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿಲ್ಲ. ನೇಮಕಾತಿ ಮಾಡಲು ಉದ್ದೇಶಿಸಿರುವ ವಿವಿಧ ವೃಂದಗಳ ಒಟ್ಟು 85 ಹುದ್ದೆಗಳನ್ನು ಸರ್ಕಾರಿ ಆದೇಶದ ಪ್ರಕಾರ ಈ ಕೆಳಕಂಡಂತೆ ವರ್ಗೀಕರಿಸಿ ಮೀಸಲಿರಿಸಲಾಗಿದೆ.
- Read more …
Aided ( ಅನುದಾನಿತ ) ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಹಾಗಿದ್ದಲ್ಲಿ ಯಾವ ವಿಷಯದ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ 2024-25.
DCC BANK ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಒಟ್ಟು ಸಂಖ್ಯೆ.
1 ಸಹಾಯಕ ವ್ಯವಸ್ಥಾಪಕರು – 04
2 ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು – 18
3 ಕಿರಿಯ ಸಹಾಯಕರು – 53
4 ಸಹಾಯಕರು/ಅಟೆಂಡರ್ – 10
DCC BANK ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೂಚನೆಗಳು .
1. ಈ ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿರುವ ಹುದ್ದೆಗಳ ಸಂಖ್ಯೆ ಮತ್ತು ವರ್ಗೀಕರಣವು ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಯಾಗಬಹುದಾಗಿದ್ದು, ನೇಮಕಾತಿ ಪ್ರಾಧಿಕಾರವು ಬದಲಾವಣೆ ಮಾಡುವ ಮತ್ತು ರದ್ದುಪಡಿಸುವ ಅಧಿಕಾರವನ್ನು ಕಾಯ್ದಿರಿಸಿಕೊಂಡಿದೆ.
2. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು, ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಅರ್ಹತೆ ಪಡೆದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.
3. ಅರ್ಜಿಗಳನ್ನು ಆನ್‌ಲೈನ್ (ONLINE) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಅಥವಾ ಕೊರಿಯರ್ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
4. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ (ONLINE) ನಲ್ಲಿ ನೀಡಿರುವ ಸೂಚನೆಗಳನ್ವಯ ಭರ್ತಿ ಮಾಡತಕ್ಕದ್ದು.
5. ಅಭ್ಯರ್ಥಿಗಳು ಆನ್ಲೈನ್ (ONLINE) ಮೂಲಕ ಸಲ್ಲಿಸುವ ಅರ್ಜಿಗಳಲ್ಲಿ ಅಪೂರ್ಣ ಹಾಗೂ ಅಸ್ಪಷ್ಟ ದಾಖಲೆಗಳನ್ನು ಅಥವಾ ತಪ್ಪು/ಅಪೂರ್ಣ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
6. ಬ್ಯಾಂಕಿನ ಈ ನೇಮಕಾತಿ ಪ್ರಕಟಣೆಗಳಲ್ಲಿನ ಮಾಹಿತಿ ಹಾಗೂ ಸೂಚನೆಗಳನ್ನು ಪೂರ್ಣವಾಗಿ ಆರಿಯದೆ ಅಭ್ಯರ್ಥಿಗಳು ತಪ್ಪೆಸಗಿದಲ್ಲಿ ಬ್ಯಾಂಕು ಜವಾಬ್ದಾರರಾಗುವುದಿಲ್ಲ.
7. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ, ಅಂತಹ ಅಭ್ಯರ್ಥಿಗಳು ಒಂದೇ ನೊಂದಣಿ ಸಂಖ್ಯೆಯಡಿಯಲ್ಲಿಯೇ ಪ್ರತಿ ಹುದ್ದೆಗೆ ಪ್ರತ್ಯೇಕ ಅರ್ಜಿ ಶುಲ್ಕ ಪಾವತಿಸಿ ಪ್ರತ್ಯೇಕ ಅರ್ಜಿ ಸಲ್ಲಿಸತಕ್ಕದ್ದು.
8. ನಿಗದಿತ ಅರ್ಜಿ ಶುಲ್ಕ ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
9. ಈ ನೇಮಕಾತಿ ಸಂಬಂಧ ಅಭ್ಯರ್ಥಿಗಳು ಸ್ಪಷ್ಟಿಕರಣ, ಪ್ರಶೋತ್ತರಗಳು, ತಕರಾರು ಮತ್ತು ಇತ್ಯಾದಿಗಳಿಗೆ ಪತ್ರ/ಇ-ಮೇಲ್ ವ್ಯವಹಾರಗಳಿಗೆ ಯಾವುದೇ ಅವಕಾಶಗಳು ಇರುವುದಿಲ್ಲ.
10. ಅಭ್ಯರ್ಥಿಯು ಸಂಬಂಧಪಟ್ಟ ವಿದ್ಯಾರ್ಹತೆಯ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಅಂಗವಿಕಲ ದೃಢೀಕರಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಮತ್ತು ಮಾಜಿ ಸೈನಿಕ ಪ್ರಮಾಣ ಪತ್ರ, ಕಂಪ್ಯೂಟರ್ ಜ್ಞಾನ ಹೊಂದಿರುವ ಮೂಲ ಪ್ರಮಾಣ ಪತ್ರ ಮತ್ತು ಇತರೆ ಎಲ್ಲಾ ಅರ್ಹತಾ ದಾಖಲಾತಿಗಳ ಮೂಲ ಪ್ರಮಾಣ ಪತ್ರಗಳನ್ನು ಅಥವಾ ಸ್ವಯಂ ದೃಢೀಕರಿಸಿದ ಮೂಲ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡತಕ್ಕದ್ದು.
11. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಗಳಲ್ಲಿ ಅಪ್ ಲೋಡ್ ಮಾಡುವ ಮಾಹಿತಿಗಳ ಆಧಾರದ ಮೇಲೆ ಅವರುಗಳು ಲಿಖಿತ ಪರೀಕ್ಷೆಗೆ ಅರ್ಹರೇ ಎಂಬುದನ್ನು ಬ್ಯಾಂಕು ಪರಿಶೀಲಿಸಿ, ಮೇಲ್ನೋಟಕ್ಕೆ ಅರ್ಹರೆಂದು ಕಂಡು ಬಂದ ಅಭ್ಯರ್ಥಿಗಳಿಗೆ ಮಾತ್ರ ಲಿಖಿತ ಪರೀಕ್ಷೆಗೆ ಕರೆಪತ್ರಗಳನ್ನು ಕಳುಹಿಸಲಾಗುತ್ತದೆ. ಆದ್ದರಿಂದ ನಿಗದಿಪಡಿಸಿರುವ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ವಯೋಮಿತಿ, ಮೀಸಲಾತಿ, ಇತ್ಯಾದಿಗಳಿಗೆ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿಗಳನ್ನು ಅಪ್ ಲೋಡ್ ಮಾಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ.
DCC BANK ಹುದ್ದೆಗಳಿಗೆ ಅರ್ಜಿ ಶುಲ್ಕ
1 ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ – ರೂ 1500/
2 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ 750/
DCC BANK ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಈ ಕೆಳಕಂಡ ವಿಧಾನವನ್ನು ಅನುಸರಿಸುವುದು:-
ಅರ್ಜಿ ಶುಲ್ಕವನ್ನು ದಿನಾಂಕ -27-11-2024 ರ ರಾತ್ರಿ 11:45 ಒಳಗಾಗಿ ಸಲ್ಲಿಸತಕ್ಕದ್ದು . ಅರ್ಜಿ ಶುಲ್ಕವನ್ನು Payment Using Net Banking, Credit Card, Debit Card, UPI ಮುಖಾಂತರ ಅರ್ಜಿ ಶುಲ್ಕ ಮತ್ತು Payment Gateway ಚಾರ್ಜಸ್‌ನ್ನು ಪಾವತಿ ಮಾಡತಕ್ಕದ್ದು. ಶುಲ್ಕವನ್ನು ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:27-11-2024ರ ರಾತ್ರಿ 11-59ರ ಒಳಗಾಗಿ ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಡಿ.ಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ ಕೊನೆಯ ದಿನಾಂಕ:27-11-2024ರ ರಾತ್ರಿ 11-59ರ ಸಮಯದೊಳಗಾಗಿ ಸಲ್ಲಿಸದೇ ಇರುವಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
DCC BANK ಹುದ್ದೆಗಳಿಗೆ ವಯೋಮಿತಿ:
ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಗಿನ ವಿವರದಂತೆ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ನಿಗದಿತ ಗರಿಷ್ಠ ವಯೋಮಿತಿಯನ್ನುಮೀರಿರಬಾರದು.
1 ಸಾಮಾನ್ಯ ವರ್ಗ – ಕನಿಷ್ಠ 18 – ಗರಿಷ್ಠ 35
2 25, 25, 32, 30 – ಕನಿಷ್ಠ 18- ಗರಿಷ್ಠ 38
3 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ – ಕನಿಷ್ಠ18 – ಗರಿಷ್ಠ -40
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ
29-10-2024
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ
27-11-2024
- Website – Click here
- Notification – Click here
DCC BANK, Chikkamagaluru District Co-operative Central Bank invites applications for 85 posts Interested candidates apply now and complete information is here 2024-25.
DCC BANK, Chikkamagaluru District Co-operative Central Bank No., Chikkamagaluru invites applications from eligible candidates through ONLINE for the recruitment of the following vacant posts. Candidates who are interested to apply should submit the application through the link provided on the official website of the bank www.chikkamagalurudccbank.com. Applications are not allowed to be sent individually by hand/post/courier etc. A total of 85 posts of various groups intended to be recruited have been classified and reserved as per the Government order as follows.
DCC BANK Vacancies Name and Total No. of Vacancies.
1 Assistant Manager – 04
2 First Class Assistants/Supervisors – 18
3 Junior Assistants – 53
4 Assistants/Attendants – 10