ವಾಹನ ಪರವಾನಗಿ, ಫಿಟ್ನೆಸ್ ಪ್ರಮಾಣಪತ್ರ ಇಲ್ಲದಿದ್ದರೂ ಸಹ ವಿಮೆ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್ -2024.
ಕರ್ನಾಟಕ ಹೈಕೋರ್ಟ್ ವಾಹನಕ್ಕೆ ಲೈಸೆನ್ಸ್, ಎಫ್‌ಸಿ ಇಲ್ಲದಿದ್ದರೂ ಪರಿಹಾರ ನೀಡಬೇಕು ಎಂದು ವಿಮಾ ಕಂಪನಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶ್ರೀರಾಮ ಜನರಲ್ ಇನ್ಶೂರೆನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಮಹತ್ವದ ತೀರ್ಪು ನೀಡಿದ್ದಾರೆ.
ಅಪಘಾತ ನಡೆದ ಸಂದರ್ಭದಲ್ಲಿ ವಾಹನಕ್ಕೆ ಪರವಾನಗಿ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ವಿಮಾ ಕಂಪನಿ ಅಪಘಾತದ ಸಂತ್ರಸ್ತರಿಗೆ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಪರಿಹಾರದ ಮೊತ್ತವನ್ನು ನಂತರ ವಾಹನ ಮಾಲೀಕರಿಂದ ವಿಮಾ ಕಂಪನಿ ವಸೂಲಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.
ಅಪಘಾತಕ್ಕೊಳಗಾದ ವಾಹನಕ್ಕೆ ಎಫ್‌ಸಿ ಇಲ್ಲದಿದ್ದರೂ ಪರಿಹಾರಕ್ಕೆ ಸೂಚಿಸಿದ್ದ ಆದೇಶ ಪ್ರಶ್ನಿಸಿ ಶ್ರೀರಾಮ ಜನರಲ್ ಇನ್ಶೂರೆನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.
ವಾಹನ ಮಾಲೀಕರು ತನ್ನ ವಾಹನವನ್ನು ರಸ್ತೆಗಿಳಿಸುವ ವೇಳೆ ಪರವಾನಧಿಗಿ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಹೊಂದಿಲ್ಲ. ಇದು ವಾಹನ ಮಾಲೀಕರ ಮೂಲಭೂತ ಉಲ್ಲಂಘನೆಯಾಗಿದೆ. ಇಲ್ಲಿ ವಾಹನ ಮಾಲೀಕರ ತಪ್ಪೂ ಇದೆ. ಹಾಗಾಗಿ, ವಿಮಾ ಕಂಪನಿಗಳ ಸಂಪೂರ್ಣ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕು. ಮಾಲೀಕರೇ ಪಾವತಿ ಮಾಡಬೇಕು’ ಎಂಬ ವಿಮಾ ಕಂಪನಿಯ ವಾದವನ್ನು ನ್ಯಾಯಪೀಠ ತಿರಸ್ಕರಿಸಿದೆ.
ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನ ಪೂರ್ಣಪೀಠದ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಾಲಯ, ‘ಧಿ’ಸ್ವರ್ಣ ಸಿಂಗ್ ಮತ್ತು ಯಲ್ಲವ್ವ ಪ್ರಕರಣದಲ್ಲಿಸುಪ್ರೀಂಕೋರ್ಟ್ ಹೇಳಿರುವಂತೆ ಇದೊಂದು ಮೂಲಭೂತ ಉಲ್ಲಂಘನೆಯಾಗಿದ್ದರೂ ವಿಮಾ ಕಂಪನಿ ತನ್ನ ಹೊಣೆಗಾರಿಕೆಯಿಂದ ನುಧಿಣುಚಿಕೊಳ್ಳುವುದಕ್ಕೆ ಅವಕಾಶವಿರುವುದಿಲ್ಲ. ಎಂಟು ವಾರಗಳಲ್ಲಿವಿಮಾ ಕಂಪನಿ ಪರಿಹಾರ ಮೊತ್ತವನ್ನು ಸಂತ್ರಸ್ತರ ಖಾತೆಗೆ ಪಾವತಿ ಮಾಡಬೇಕು, ಬಳಿಕ ವಾಹನ ಮಾಲೀಕರಿಂದ ವಸೂಲಿ ಮಾಡಬೇಕು,’ಧಿ’ ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.
ಎರಡೂ ಮೇಲ್ಮನವಿಗಧಿಳನ್ನು ಭಾಗಶಃ ಪುರಸ್ಕರಿಸಿದ ನ್ಯಾಯಪೀಠ, ಪರಿಹಾರ 13.44 ಲಕ್ಷ ರೂ.ಗಳನ್ನು 17.88 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿದ್ದು, ಶೇ. 9 ರಷ್ಟು ವಾರ್ಷಿಕ ಬಡ್ಡಿ ಸೇರಿಸಿ ಪಾವತಿ ಮಾಡಲು ಆದೇಶಿಸಿದೆ.
ಪ್ರಕರಣದ ಹಿನ್ನೆಲೆ ಏನು?
ಹೊಸಕೋಟೆ-ಚಿಕ್ಕತಿರುಪತಿ ಮಾರ್ಗದಲ್ಲಿ ಕೆಲಸದಿಂದ ಬೈಸಿಕಲ್‌ನಲ್ಲಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನಂದೀಶಪ್ಪ ಎಂಬುವರಿಗೆ ಸರಕು ವಾಹನವೊಂದು ಡಿಕ್ಕಿ ಹೊಡೆದಿತ್ತು. ಇದರಿಂದ ತಲೆಗೆ ತೀವ್ರತರದ ಪೆಟ್ಟಾಗಿದ್ದು, ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಅದು ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ 13.44 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿತ್ತು. ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ನಂದೀಶಪ್ಪ ಪತ್ನಿ ಮತ್ತು ನ್ಯಾಯಾಧಿಕರಣದ ಆದೇಶ ರದ್ದು ಕೋರಿ ವಿಮಾ ಕಂಪನಿಗಳು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದವು.