Good news for working class: Minimum wage increase 2024-25 soon.
working class,State Labor Department Commissioner H.N. said that the minimum wages of working class workers in the state will be increased soon. Gopalakrishna promised the working class.
- Read more…
Civil Service Recruitment, 2024 ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ , 341 ಹುದ್ದೆಗಳಿಗೆ ನೇಮಕಾತಿ ಹಾಗಾದರೆ ಈ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ-2024-25.
While inaugurating a workshop on effective implementation of labor laws and schemes by the Labor Department, District Administration, Legal Services Authority and Zilla Panchayat at the Builders Charitable Trust Hall in Vidyaranyapuram on Friday, he promised to increase the minimum wage.
Pay revision was done 5 years back. Now it will be determined scientifically. Presently 14 thousand rupees are being paid and it is difficult to live on it. It is not possible to pay 35 thousand rupees as requested by the organizations. He said that a minimum wage agreed upon by all will be fixed.
Codify 25 Labor Acts 4 Labor Codes may come into effect from next financial year. The process of making rules for this is going on. There are 38 lakh registered construction workers in the state. An average of 1 thousand crore labor cess is collected per year. He said that many facilities are being provided for the workers.
Seven schemes are implemented by the Labor Welfare Board. Employers have to regularly pay their dues to the Board. Last year, 57 crores were spent and we provided social security programs to 29 thousand beneficiaries, he said.
The unorganized sector has to register free of charge on the Centre’s e-shrum portal to avail social security programmes. 398 categories of unorganized workers are allowed. So far only 99.87 lakh people have registered. He informed that the rest should also come forward.
It is estimated that there are 2.39 lakh gig sector workers (independent workers) in the state. An insurance plan has been implemented for them. However, so far only 10 thousand people have registered. There is also a thought of forming a separate board for them. There are 40,000 to 50,000 newspaper publishers and they will also get insurance, he said.
Working class, ಕಾರ್ಮಿಕ ವರ್ಗಕ್ಕೆ ಗುಡ್ ನ್ಯೂಸ್: ಶೀಘ್ರದಲ್ಲೇ ಕನಿಷ್ಠ ವೇತನ ಹೆಚ್ಚಳ 2024-25.
Working class, ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಿಸಲಾಗುವುದು ಎಂದು ರಾಜ್ಯ ಕಾರ್ಮಿಕ ಇಲಾಖೆಯ ಆಯುಕ್ತ ಎಚ್.ಎನ್. ಗೋಪಾಲಕೃಷ್ಣ ಕಾರ್ಮಿಕ ವರ್ಗಕ್ಕೆ “working class “ ಭರವಸೆ ನೀಡಿದ್ದಾರೆ.
ವಿದ್ಯಾರಣ್ಯಪುರಂನ ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಕಾರ್ಮಿಕ ಕಾಯ್ದೆಗಳು ಹಾಗೂ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಕನಿಷ್ಠ ವೇತನ ಹೆಚ್ಚಿಸುವ ಭರವಸೆ ನೀಡಿದರು.
ವೇತನ ಪರಿಷ್ಕರಣೆ 5 ವರ್ಷಗಳ ಹಿಂದೆ ನಡೆದಿತ್ತು. ಈಗ ವೈಜ್ಞಾನಿಕವಾಗಿ ನಿಗದಿಪಡಿಸಲಾಗುವುದು. ಪ್ರಸ್ತುತ 14 ಸಾವಿರ ರೂಪಾಯಿ ಕೊಡಲಾಗುತ್ತಿದ್ದು, ಅದರಲ್ಲಿ ಜೀವನ ನಡೆಸುವುದು ಕಷ್ಟ. ಹಾಗೆಂದು ಸಂಘಟನೆಗಳು ಕೇಳಿದಂತೆ 35 ಸಾವಿರ ರೂಪಾಯಿ ಕೊಡುವುದಕ್ಕೂ ಆಗುವುದಿಲ್ಲ. ಎಲ್ಲರಿಗೂ ಒಮ್ಮತವಾದ ಕನಿಷ್ಠ ವೇತನ ನಿಗದಿಪಡಿಸಲಾಗುವುದು ಎಂದು ಹೇಳಿದರು.
೨೫ ಕಾರ್ಮಿಕ ಕಾಯ್ದೆಗಳನ್ನು ಕ್ರೋಡೀಕರಿಸಿ 4 ಕಾರ್ಮಿಕ ಸಂಹಿತೆಗಳು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೆ ಬರಬಹುದು. ಇದಕ್ಕಾಗಿ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ . ರಾಜ್ಯದಲ್ಲಿ 38 ಲಕ್ಷ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿದ್ದಾರೆ. ವರ್ಷಕ್ಕೆ ಸರಾಸರಿ 1 ಸಾವಿರ ಕೋಟಿ ಕಾರ್ಮಿಕ ಸೆಸ್ ಸಂಗ್ರಹವಾಗುತ್ತಿದೆ. ಅದರಲ್ಲಿ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಲೇಬರ್ ವೆಲ್‌ಫೇರ್ ಬೋರ್ಡ್‌ನಿಂದ ಏಳು ಯೋಜನೆ ಜಾರಿಗೊಳಿಸಲಾಗಿದೆ. ಉದ್ಯೋಗದಾತರು ಮಂಡಳಿಗೆ ಪಾವತಿಸಬೇಕಾದ ಪಾಲನ್ನು ನಿಯಮಿತವಾಗಿ ಕಟ್ಟಬೇಕು. ಹೋದ ವರ್ಷ 57 ಕೋಟಿ ವೆಚ್ಚವಾಗಿದ್ದು, 29 ಸಾವಿರ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಒದಗಿಸಿದ್ದೇವೆ ಎಂದರು.
ಅಸಂಘಟಿತ ವಲಯದವರು ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪಡೆದುಕೊಳ್ಳಲು ಕೇಂದ್ರದ ಇ-ಶ್ರಮ್ ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬೇಕು. 398 ವರ್ಗದ ಅಸಂಘಟಿತ ಕಾರ್ಮಿಕರಿಗೆ ಅವಕಾಶವಿದೆ. ಈವರೆಗೆ 99.87 ಲಕ್ಷ ಮಂದಿ ಮಾತ್ರ ನೋಂದಾಯಿಸಿದ್ದಾರೆ. ಉಳಿದವರೂ ಮುಂದಾಗಬೇಕು ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಗಿಗ್ ಕ್ಷೇತ್ರದ ಕಾರ್ಮಿಕರು (ಸ್ವತಂತ್ರ ಕಾರ್ಮಿಕರು) 2.39 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ. ಅವರಿಗೆ ವಿಮೆ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಈವರೆಗೆ 10ಸಾವಿರ ಮಂದಿ ಮಾತ್ರವೇ ನೋಂದಾಯಿಸಿದ್ದಾರೆ. ಅವರಿಗಾಗಿಯೇ ಪ್ರತ್ಯೇಕ ಮಂಡಳಿ ರಚಿಸುವ ಚಿಂತನೆಯೂ ನಡೆದಿದೆ. ದಿನಪತ್ರಿಕೆ ಹಾಕುವ 40ಸಾವಿರದಿಂದ 50 ಸಾವಿರ ಮಂದಿ ಇದ್ದು, ಅವರಿಗೂ ವಿಮೆ ದೊರೆಯಲಿದೆ ಎಂದು ತಿಳಿಸಿದರು.