Good News:ರಾಜ್ಯದ ಎಲ್ಲಾ ಶಾಲೆಗಳಲ್ಲಿ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದೆ.

Good News:ರಾಜ್ಯದ ಎಲ್ಲಾ ಶಾಲೆಗಳಲ್ಲಿ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದೆ.

Good News

Good News:2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000/- ಗಳಷ್ಟು ಹೆಚ್ಚಿಸಿರುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. 2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-109 ರಲ್ಲಿನ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000/- ಗಳಷ್ಟು ಹೆಚ್ಚಿಸುವ ಕುರಿತು ಉಲ್ಲೇಖದ ಸರ್ಕಾರದ ಆದೇಶ ಸಂಖ್ಯೆ:ಇಪಿ.57.ಎಂಎಂಎಸ್.2025. ಬೆಂಗಳೂರು, ದಿನಾಂಕ:26.05.2025ರಲ್ಲಿ ಕೆಳಕಂಡಂತೆ ಆದೇಶಿರುತ್ತಾರೆ (ಉಲ್ಲೇಖ-2ರ ಸರ್ಕಾರದ ಆದೇಶವನ್ನು ಅಡಕವಿರಿಸಿದೆ).

ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸದರಿ ಆದೇಶವನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದೆ.

ಈ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ಹೆಚ್ಚಿಸಲಾಗಿರುವ ರೂ.1000/-ಗಳ ಮಾಸಿಕ ಸಂಭಾವನೆ ಮೊತ್ತವನ್ನು ಪಾವತಿಸಲು ಅಗತ್ಯವಿರುವ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ ಲೆಕ್ಕ ಶೀರ್ಷಿಕೆ:2202-00-101-0-18 2202-01-196-1-02) ಯ ಉಪ ಶೀರ್ಷಿಕೆ: 324 ರಡಿ ನಿಗದಿಯಾಗಿರುವ ಅನುದಾನದಿಂದ ಪಾವತಿಸುವಂತೆ ಸೂಚಿಸಿದೆ.
ಗೌರವ ಸಂಭಾವನೆಯನ್ನು ನೇರ ನಗದು ವರ್ಗಾವಣೆ ವೇದಿಕೆ (Direct Benefit Transfer) ಮೂಲಕವೇ ಪಾವತಿಸಲು ಕ್ರಮ ವಹಿಸಲು ತಿಳಿಸಿದೆ.

ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ಕೊಟ್ಟಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.

Govt Order – CLICK HERE

WhatsApp Group Join Now
Telegram Group Join Now