Government Employee: ಕಛೇರಿ ಸಮಯ ಪಾಲನೆ, ಸರ್ಕಾರಿ ನೌಕರರಿಗೆ ಹೊಸ ಆದೇಶ-2025.
ಸರ್ಕಾರಿ ಕಛೇರಿಗಳಿಗೆ ಅಧಿಕಾರಿಗಳು/ ನೌಕರರು ಸರಿಯಾದ ಸಮಯಕ್ಕೆ ಆಗಮಿಸುವುದಿಲ್ಲ. ಕಛೇರಿ ವೇಳೆ ಮುಗಿಯುವ ಮೊದಲೇ ಅಲ್ಲಿಂದ ಹೊರಟಿರುತ್ತಾರೆ ಎಂಬ ಆರೋಪಗಳಿವೆ. ಈ ಕುರಿತು ಜನರು ಹಲವು ಬಾರಿ ದೂರುಗಳನ್ನು ಸಹ ನೀಡುತ್ತಾರೆ. ಆದ್ದರಿಂದ ಕಛೇರಿ ವೇಳೆಯಲ್ಲಿ ಅಧಿಕಾರಿಗಳು ಮತ್ತು ನೌಕರರು ಪಾಲಿಸಬೇಕಾದ ನಿಯಮಗಳ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಈ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಈ ಕುರಿತು ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು ಅದೇಶವನ್ನು ಹೊರಡಿಸಿದ್ದಾರೆ. ಈ ಆದೇಶವು ಕಛೇರಿ ವೇಳೆಯಲ್ಲಿ ಅಧಿಕಾರಿಗಳು ಮತ್ತು ನೌಕರರು ಪಾಲಿಸಬೇಕಾದ ಮುಖ್ಯ ಸೂಚನೆಗಳು ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಪತ್ರ ದಿನಾಂಕ 1/10/2024ರ ಉಲ್ಲೇಖಿಸಲಾಗಿದೆ.
ಸರ್ಕಾರಿ ನೌಕರ ಆದೇಶಗಳ ವಿವರಗಳು.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನೆ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚಿಸಿದೆ ಎಂದು ಹೇಳಿದೆ.
-
Click here…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ:2025-26 ನೇ ಸಾಲಿಗೆ ಕರ್ನಾಟಕದ ರಾಜ್ಯದಲ್ಲಿನ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ.
• ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
• ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
• ಕಛೇರಿ ಸಮಯದಲ್ಲಿ ನೌಕರರು/ ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ಚಲನ-ವಲನ ವಹಿಯಲ್ಲಿ ಸಕಾರಣವನ್ನು ನಮೂದಿಸಿ, ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
• ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
• ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
• ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
• ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
• ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
• ಇ-ಆಫೀಸ್ ಲಭ್ಯವಿರುವ ಕಡೆ ಕಡತ/ ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.
ಅಲ್ಲದೇ ಸುತ್ತೋಲೆಯಲ್ಲಿ ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಈಗಾಗಲೇ ಕರ್ನಾಟಕ ಸರ್ಕಾರ ತನ್ನ ನೌಕರರ ಗುರುತಿನ ಚೀಟಿ ಟ್ಯಾಗ್ ವಿನ್ಯಾಸವನ್ನು ಬದಲಿಸಿದೆ. ಹೊಸದಾಗಿ ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ನೂತನ ಟ್ಯಾಗ್ ಪರಿಚಯಿಸಿದ್ದು, ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸಬೇಕು ಎಂದು ವಿವಿಧ ಸುತ್ತೋಲೆಗಳ ಮೂಲಕ ಮಾಹಿತಿ ನೀಡಿದೆ. ಆದರೂ ಸಹ ನೌಕರರು/ ಸಿಬ್ಬಂದಿ ಅದನ್ನು ಧರಿಸುತ್ತಿಲ್ಲ ಎಂಬ ದೂರುಗಳ ಹಿನ್ನಲೆಯಲ್ಲಿ ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಅಲ್ಲದೇ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು ಎಂದು ಈ ಹಿಂದೆ ಸುತ್ತೋಲೆಯಲ್ಲಿ ಸೂಚನೆಯನ್ನು ನೀಡಲಾಗಿತ್ತು.