Government Jobs: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ, ಖಾಲಿ ಇರುವ ಹುದ್ದೆಗಳು ವಿಭಾಗವಾರು ಅಂಕಿಅಂಶಗಳ ಸಂಪೂರ್ಣ ವಿವರ ಇಲ್ಲಿದೆ.
Government Jobs:ಶಿಕ್ಷಣ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟಾರೆ 2.76 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಧಿಕೃತ ಮಾಹಿತಿಯೊಂದು ತಿಳಿಸಿದೆ. ಹಾಗಾದರೆ ಯಾವ ಯಾವ ಹುದ್ದೆಗಳು ಎಷ್ಟು ಖಾಲಿ ಇವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಬಹುದು.
ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇದರಲ್ಲಿ 16,017 ಹುದ್ದೆಗಳು A ದರ್ಜೆಯ ಹುದ್ದೆಗಳಾಗಿವೆ. 16,734 B ದರ್ಜೆಯ ಹುದ್ದೆಗಳು, 1,66,021 C ದರ್ಜೆಯ ಹುದ್ದೆಗಳು, 77,614 D ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ತಿಳಿದುಬಂದಿದೆ.
ಶಿಕ್ಷಣ ಇಲಾಖೆಗಳಲ್ಲಿ 70,727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು, ಒಳ ಆಡಳಿತ ಇಲಾಖೆಯಲ್ಲಿ 26,168, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ. ಗ್ರೂಪ್-ಸಿ ವೃಂದದ 96,844 ಹುದ್ದೆಗಳನ್ನು (ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಮನಾಂತರ) ಮತ್ತು ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದಗಳ ಒಟ್ಟಾರೆ 4,673 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಪ್ರಸ್ತಾವನೆ ಹೋಗಿರುವುದಾಗಿ ಸಿಎಂ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ಕೆಲಸಕ್ಕೆ ಸೇರುವ ನೌಕರರು ಕೆಲವೊಂದು ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಸಿವಿಲ್ ಸೇವಾ ನಡತೆ ನಿಯಮಗಳಲ್ಲಿ ಸರ್ಕಾರಿ ನೌಕವರರು ಹೇಗೆ ಇರಬೇಕು ಎಂದು ತಿಳಿಸಲಾಗಿರುತ್ತದೆ. ಅದಕ್ಕೆ ಸಂಬಂಧಪಟ್ಟ ಒಂದಿಷ್ಟು ಮಾಹಿತಿ ಇಲ್ಲಿದೆ.
* ಪ್ರತಿಯೊಬ್ಬ ಸರ್ಕಾರಿ ನೌಕರರು ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು,
* ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು
* ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ಯಾವುದನ್ನೂ ಮಾಡತಕ್ಕದ್ದಲ್ಲ;
* ಯಾವುದೇ ಅಪರಾಧಿಕ ಚಟುವಟಿಕೆಯಲ್ಲಿ ತೊಡಗತಕ್ಕದ್ದಲ್ಲ
* ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು
* ರಾಜಕೀಯವಾಗಿ ತಟಸ್ಥನಾಗಿರತಕ್ಕದ್ದು
* ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ, ಅರ್ಹತಾದಾಯಕ, ನ್ಯಾಯ ಸಮ್ಮತಿ ಮತ್ತು ನಿಷ್ಪಕ್ಷಪಾತತೆಯ ಮೂಲ ತತ್ವಗಳನ್ನು ಅಳವಡಿಸಿಕೊಂಡಿರತಕ್ಕದ್ದು.
* ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ನಿರ್ವಹಿಸತಕ್ಕದ್ದು
* ಸಾರ್ವಜನಿಕರಿಗೆ ಸ್ಪಂದನಾಶೀಲನಾಗಿರತಕ್ಕದ್ದು ಹಾಗೂ;
* ಸಾರ್ವಜನಿಕರೊಂದಿಗೆ ಸೌಜನ್ಯ ಹಾಗೂ ವಿನಯದಿಂದ ವರ್ತಿಸತಕ್ಕದ್ದು.
ಮೇಲ್ವಿಚಾರಣಾ ಹುದ್ದೆಯನ್ನು ಹೊಂದಿರುವ ಪ್ರತಿಯೊಬ್ಬ ಸರ್ಕಾರಿ ನೌಕರನು, ತತ್ಕಾಲದಲ್ಲಿ ತನ್ನ ನಿಯಂತ್ರಣಕ್ಕೆ ಮತ್ತು ಅಧಿಕಾರಕ್ಕೆ ಒಳಪಟ್ಟಿರುವ ಎಲ್ಲಾ ಸರ್ಕಾರಿ ನೌಕರರ ನೀತಿ ನಿಷ್ಠೆಯನ್ನು ಮತ್ತು ಕರ್ತವ್ಯ ಶ್ರದ್ಧೆಯನ್ನು ಸುನಿಶ್ಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು.
* ಪ್ರತಿಯೊಬ್ಬ ಸರ್ಕಾರಿ ನೌಕರನು, ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಸೌಜನ್ಯಯುತವಾದ ವರ್ತನೆಯನ್ನು ಹೊಂದಿರಬೇಕಾಗುತ್ತದೆ.
* ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಸರ್ವೋಚ್ಛತೆಗೆ ಸ್ವತಃ ಬದ್ಧನಾಗಿರತಕ್ಕದ್ದು ಮತ್ತು ಎತ್ತಿ ಹಿಡಿಯಬೇಕಾಗುತ್ತದೆ.
* ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆ, ರಾಷ್ಟ್ರದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಯನ್ನು ಸಮರ್ಥಿಸತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು.
* ಸಾರ್ವಜನಿಕ ಹಿತದೃಷ್ಠಿಯಿಂದ ಮಾತ್ರವೇ ನಿರ್ಧಾರಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಸಾರ್ವಜನಿಕ ಸಂಪನ್ಮೂಲಗಳನ್ನು ಸಮರ್ಥವಾಗಿ, ಪರಿಣಾಮಕಾರಿಯಾಗಿ ಮತ್ತು ಮಿತವ್ಯಯಕರವಾಗಿ ಬಳಸತಕ್ಕದ್ದು ಅಥವಾ ಬಳಸುವಂತೆ ಮಾಡತಕ್ಕದ್ದು.
* ತನ್ನ ಸಾರ್ವಜನಿಕ ಕರ್ತವ್ಯಗಳಿಗೆ ಸಂಬಂಧಿಸಿದ ಯಾವುದೇ ಖಾಸಗಿ ಹಿತಾಸಕ್ತಿಯನ್ನು ಘೋಷಿಸತಕ್ಕದ್ದು ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಸಂರಕ್ಷಿಸುವಂಥ ರೀತಿಯಲ್ಲಿ ಯಾವುದೇ ಬಿಕ್ಕಟ್ಟುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳತಕ್ಕದ್ದು.
* ತನ್ನ ಪದೀಯ ಕರ್ತವ್ಯಗಳ ನಿರ್ವಹಣೆಯಲ್ಲಿ ತನ್ನ ಮೇಲೆ ಪ್ರಭಾವ ಬೀರಬಹುದಾದ ಯಾರೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಯ ಯಾವುದೇ ಹಣಕಾಸು ಅಥವಾ ಇತರ ಆಮಿಷಗಳಿಗೆ ಒಳಗಾಗಬಾರದು.
* ನಾಗರಿಕ ಸೇವಾ ನೌಕರನಾಗಿ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳಬಾರದು ಮತ್ತು ಸ್ವಂತಕ್ಕಾಗಿ, ತನ್ನ ಕುಟುಂಬಕ್ಕಾಗಿ ಅಥವಾ ತನ್ನ ಸ್ನೇಹಿತರಿಗಾಗಿ ಹಣಕಾಸು ಅಥವಾ ಬಹು ಮುಖ್ಯ ಪ್ರಯೋಜನಗಳನ್ನು ದೊರಕಿಸಿಕೊಡುವ ಉದ್ದೇಶದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು.
* ಅರ್ಹತೆಯ ಆಧಾರದ ಮೇಲೆ ಮಾತ್ರವೇ ಆಯ್ಕೆಗಳನ್ನು ಮಾಡ ತಕ್ಕದ್ದು. ನಿರ್ಣಯಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಶಿಫಾರಸ್ಸುಗಳನ್ನು ಮಾಡಬೇಕಾಗುತ್ತದೆ.
* ನ್ಯಾಯಸಮ್ಮತವಾಗಿ ಮತ್ತು ನಿಷ್ಪಕ್ಷಪಾತದಿಂದ ಕಾರ್ಯನಿರ್ವಹಿಸತಕ್ಕದು ಹಾಗೂ ಯಾವುದೇ ವ್ಯಕ್ತಿಯ ಅಥವಾ ಪಕ್ಷದ ವಿರುದ್ಧ ತಾರತಮ್ಯ ಮಾಡಬಾರದು.
* ಯಾವುದೇ ಕಾನೂನು, ನಿಯಮಗಳು, ವಿನಿಯಮಗಳು ಮತ್ತು ಸ್ಥಾಪಿತ ಪದ್ಧತಿಗಳಿಗೆ ವಿರುದ್ಧವಾಗಿರುವ ಅಥವಾ ವಿರುದ್ಧವಾಗಿರಬಹುದಾದ ಯಾವುದೇ ಕಾರ್ಯ ಮಾಡುವುದನ್ನು ನಿಬರ್ಂಧಿಸಬೇಕಾಗುತ್ತದೆ.
* ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಮತ್ತು ತನಗೆ ಯುಕ್ತವಾಗಿ ತಿಳಿಸಲಾದ ಕಾನೂನುಬದ್ಧ ಆದೇಶಗಳನ್ನು ಜಾರಿಗೊಳಿಸಲು ಬದ್ಧನಾಗಿರಾಗಿಬೇಕು.
Government Jobs: Here is the complete details of vacant posts department wise in 43 departments of the state government including education department.
Government Jobs: According to an official information of the government, a total of 2.76 lakh posts are vacant in 43 departments of the state government, including the education department. So it can be noted that the complete information about which posts are vacant along with the statistics is given here.
A total of 2,76,386 posts are vacant in 43 departments of the state government. Out of this 16,017 posts are A grade posts. It is known that 16,734 B grade posts, 1,66,021 C grade posts, 77,614 D grade posts are vacant.
There are 70,727 vacancies in education departments. There are 37,069 vacancies in the Health and Medical Education Department, 26,168 in the Internal Administration Department, 11,145 in the Revenue Department and 10,898 in the Rural Development Department. It said that 96,844 posts of Group-C category (stenographers, typists, drivers and Group-D parallel) and technical posts have been decided to be filled up on contract and outsource basis.
CM Siddaramaiah told the House that the government has proposed to fill up a total of 4,673 posts in various groups of various departments in the state.
Employees joining state government jobs are required to follow certain rules. The Karnataka Civil Service Rules of Conduct state how government employees should behave. Here is some information related to it.
* Every Government servant must have absolute integrity,
* Must have duty diligence
* Should not do anything unbecoming of a Government servant;
* Should not engage in any criminal activity
* Should have high moral ideals
* Should be politically neutral
* In performing his duties, he shall adopt the basic principles of meritocracy, fairness and impartiality.
* Accountability and transparency should be maintained
* Be responsive to the public and;
* Should behave politely and politely with the public.
Every Government servant holding a supervisory position shall take all possible steps to ensure the integrity and devotion to duty of all Government servants under his control and authority for the time being.
* Every Government servant is required to behave in a courteous manner while performing his duties.
* Must adhere to and uphold the supremacy of the Constitution and democratic values.
* India’s sovereignty and integrity, national security, public order, decency and morality shall be defended and upheld.
* Decisions should be taken only in the public interest and public resources should be used or caused to be used efficiently, effectively and economically.
* Must declare any private interest related to his public duties and take action to resolve any crises in a manner that preserves the public interest.
* No financial or other inducement shall be entertained by any person or any body which may influence him in the discharge of his official duties.
* He should not abuse his authority as a civil servant and take decisions for himself, his family or his friends with the intention of obtaining financial or other important benefits.
* Selections should be made on the basis of merit only. Decisions must be made and recommendations made.
* Should act fairly and impartially and should not discriminate against any person or party.
* Any act which is or may be contrary to any law, rule, regulation and established practice shall be prohibited.
* Must maintain discipline in the performance of his duties and be bound to execute lawful orders duly communicated to him.