ಕರ್ನಾಟಕ ಸರ್ಕಾರ: ಸರ್ಕಾರದ ಸಭೆ ಸಮಾರಂಭಗಳ ಆಯೋಜನೆಯಲ್ಲಿ ಪಾಲಿಸಬೇಕಾದ, ಶಿಷ್ಠಾಚಾರ ಕುರಿತು ಸಮಗ್ರ ಸೂಚನೆಗಳನ್ನು ಹೊರಡಿಸುವ ಕುರಿತು-2025.

ಕರ್ನಾಟಕ ಸರ್ಕಾರ: ಸರ್ಕಾರದ ಸಭೆ ಸಮಾರಂಭಗಳ ಆಯೋಜನೆಯಲ್ಲಿ ಪಾಲಿಸಬೇಕಾದ, ಶಿಷ್ಠಾಚಾರ ಕುರಿತು ಸಮಗ್ರ ಸೂಚನೆಗಳನ್ನು ಹೊರಡಿಸುವ ಕುರಿತು-2025.

ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರ:ಸರ್ಕಾರಿ ಸಭೆ ಮತ್ತು ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಈಗಾಗಲೇ ಸಮಗ್ರವಾದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್‌ಪಿ 2018 (1) ದಿನಾಂಕ: 06.03.2019ರಡಿ ಹೊರಡಿಸಲಾಗಿದೆ. ಸದರಿ ಸುತ್ತೋಲೆಗೆ ಕೆಲವೊಂದು ಅಂಶಗಳನ್ನು ಸೇರಿಸಬೇಕಾಗಿರುವುದರಿಂದ. ಈ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದೆ. ಹೊಸದಾಗಿ ಸೇರಿಸಿದ ಅಂಶಗಳನ್ನು ಅನುಕ್ರಮ ಸಂಖ್ಯೆ ಗರ ಕೆಳಗಡೆ ದಪ್ಪ ಅಕ್ಷರಗಳಿಂದ ನಮೂದಿಸಿದೆ.

ಕರ್ನಾಟಕ ಸರ್ಕಾರ:ಸಾಮಾನ್ಯ ಸೂಚನೆಗಳು.

1 ಈ ಸೂಚನೆಗಳು ರಾಜ್ಯ ಸರ್ಕಾರದ ವತಿಯಿಂದ ನಡೆಸುವ ರಾಜ್ಯ / ಜಿಲ್ಲಾ / ತಾಲ್ಲೂಕು ಮಟ್ಟದ ಸಮಾರಂಭಗಳಿಗೆ ಮತ್ತು ರಾಜ್ಯದ ಧನ ಸಹಾಯದಿಂದ ಸ್ಥಾಪಿಸಲ್ಪಟ್ಟ ರಾಜ್ಯ ಮಟ್ಟದ ಸಹಕಾರಿ ಸಂಘಗಳು ಹಾಗೂ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳಿಗೆ ಅನ್ವಯಿಸುತ್ತವೆ.

2 ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಒಳಗೊಂಡಂತೆ ಸರ್ಕಾರದ ಆ ಇಲಾಖೆಯ ಅಧಿಕೃತ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಯ ಸಚಿವರ ಸಮಾಲೋಚನೆಯೊಂದಿಗೆ ನಿಗದಿಪಡಿಸಿ ಕಾರ್ಯಕ್ರಮವನ್ನು ಏರ್ಪಡಿಸತಕ್ಕದ್ದು.

3 ಸರ್ಕಾರಿ ಕಾರ್ಯಾಕ್ರಮವನ್ನು ನಡೆಸಲು ಕನಿಷ್ಠ ಪಕ್ಷ 7 ದಿವಸಗಳ ಸಮಯಾವಕಾಶವನ್ನು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೋರುವುದು.

4. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಬದಲಾಗಿ ಜನಪ್ರತಿನಿದಿಗಳು ಹಾಗೂ ಸಾರ್ವಜನಿಕರೇ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಸರ್ಕಾರಿ ಸಮಾರಂಭಗಳನ್ನು ಏರ್ಪಡಿಸಬಾರದು
5. ಯಾವುದೇ ಸರ್ಕಾರಿ ಸಭೆ ಅಥವಾ ಕಾರ್ಯಕ್ರಮವನ್ನು ಖಾಸಗಿ ನಿವಾಸದಲ್ಲಿ ಏರ್ಪಡಿಸುವಂತಿಲ್ಲ.

ಕರ್ನಾಟಕ ಸರ್ಕಾರ:ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವ ಬಗ್ಗೆ.

1. ಸರ್ಕಾರದ ಯಾವುದೇ ಕಾರ್ಯಕ್ರಮವಾಗಿದ್ದರೂ ಸಾಮಾನ್ಯವಾಗಿ ಕಾರ್ಯಕ್ರಮ ನಡೆಯುವ ಸ್ಥಳದ ವ್ಯಾಪ್ತಿಗೊಳಪಡುವ ವಿಧಾನ ಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿಯೇ ಕಾರ್ಯಕ್ರಮ ನಡೆಸುವುದು. ಆದರೆ ಕೆಲವೊಂದು ಸಂದರ್ಭದಲ್ಲಿ ಒಂದು ವಿಧಾನಸಭಾ ಕ್ಷೇತ್ರದ ಸ್ಥಳೀಯ ಕಾರ್ಯಕ್ರಮವನ್ನು ಸದರಿ ವಿಧಾನಸಭಾ ಕ್ಷೇತ್ರದ ಹೋಬಳಿ/ಪ್ರದೇಶವಿರುವ ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ಆಯೋಜಿಸಿದಾಗ. ಸದರಿ ತಾಲ್ಲೂಕು ಕೇಂದ್ರ ಸ್ಥಾನವು ಇನ್ನೊಂದು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದರೂ ಸಹ ಅಂತಹ ಕಾರ್ಯಕ್ರಮಗಳಲ್ಲಿ, ಕಾರ್ಯಕ್ರಮವು ಯಾವ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟರುತ್ತದೆಯೋ ಆ ಸಂಬಂಧಪಟ್ಟ ಶಾಸಕರು ಅಧ್ಯಕ್ಷತೆಯನ್ನು ವಹಿಸುವುದು.

2. ಕೆಲವೊಮ್ಮೆ ಕಾರಣಾಂತರಗಳಿಂದ ವಿಧಾನಸಭಾ ಸದಸ್ಯರ ಸ್ಥಾನವು ತೆರವಾದ ಸಂದರ್ಭದಲ್ಲಿ ಸರ್ಕಾರಿ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಕೆಳಕಂಡಂತೆ ವಹಿಸುವುದು.

A. ಸರ್ಕಾರಿ ಕಾರ್ಯಕ್ರಮಗಳನ್ನು ಮಾನ್ಯ ಮುಖ್ಯ ಮಂತ್ರಿಯವರು ಉದ್ಘಾಟಿಸಿದಾಗ ಜಿಲ್ಲಾ ಸಚಿವರು ಅಧ್ಯಕ್ಷತೆಯನ್ನು ವಹಿಸುವುದು.

B.ಸಂಬಂಧಪಟ್ಟ ಜಿಲ್ಲಾ ಸಚಿವರು ಉದ್ಘಾಟಿಸಿದಾಗ ಇಲಾಖಾ ಸಚಿವರು ಅಧ್ಯಕ್ಷತೆಯನ್ನು ವಹಿಸುವುದು.

C.ಜಿಲ್ಲಾ ಸಚಿವರು ಸರ್ಕಾರಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದಾಗ, ಇಲಾಖಾ ಸಚಿವರು ಹಾಜರಾಗದೇ ಇರುವ ಸಂದರ್ಭಗಳಲ್ಲಿ. ಜಿಲ್ಲಾ ಸಚಿವರೇ ಅಧ್ಯಕ್ಷತೆಯನ್ನು ಸಹ ವಹಿಸುವುದು.

Click Here To Download

WhatsApp Group Join Now
Telegram Group Join Now

2 thoughts on “ಕರ್ನಾಟಕ ಸರ್ಕಾರ: ಸರ್ಕಾರದ ಸಭೆ ಸಮಾರಂಭಗಳ ಆಯೋಜನೆಯಲ್ಲಿ ಪಾಲಿಸಬೇಕಾದ, ಶಿಷ್ಠಾಚಾರ ಕುರಿತು ಸಮಗ್ರ ಸೂಚನೆಗಳನ್ನು ಹೊರಡಿಸುವ ಕುರಿತು-2025.”

Leave a Comment