Govt Order:7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೂ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸುವ ಬಗ್ಗೆ.-2024.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.
govt Order:ಮೇಲೆ ಓದಲಾದ ಕ್ರಮಾಂಕ(1)ರ ಸರ್ಕಾರದ ಆದೇಶದಲ್ಲಿ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಸದರಿ ಆದೇಶದ ಕಂಡಿಕೆ-8ರಲ್ಲಿ “ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ” ಎಂದು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ(2)ರ ಸರ್ಕಾರದ ಆದೇಶದಲ್ಲಿ ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ವಿಸ್ತ್ರತವಾದ ಆದೇಶವನ್ನು ಹೊರಡಿಸಿದ್ದು, ಸದರಿ ಆದೇಶದ ಕಂಡಿಕೆ 11.1ರಲ್ಲಿ “ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ” ಎಂದು ಆದೇಶಿಸಲಾಗಿರುತ್ತದೆ.
ಮೇಲ್ಕಂಡಂತೆ ಪರಿಶೀಲಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ, ಈ ಕೆಳಕಂಡಂತೆ ಆದೇಶಿಸಿದೆ.
Click here….
ಧನ್ಯವಾದಗಳು…….