Gram Panchayat By-Election:ವಿವಿಧ ಕಾರಣಗಳಿಂದ ಖಾಲಿ ಇರುವ 265 ಗ್ರಾಮ ಪಂಚಾಯತ್ ಸದಸ್ಯರುಗಳ ಉಪಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.

Gram Panchayat By-Election:ವಿವಿಧ ಕಾರಣಗಳಿಂದ ಖಾಲಿ ಇರುವ 265 ಗ್ರಾಮ ಪಂಚಾಯತ್ ಸದಸ್ಯರುಗಳ ಉಪಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.

Gram Panchayat By-Election

Gram Panchayat By-Election:ಭಾರತ ಸಂವಿಧಾನ ಅನುಚ್ಛೇದ 243K ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ವಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308 ರಲ್ಲಿ ದತ್ತವಾಗಿರುವ ಅಧಿಕಾರದ ಮೇರೆಗೆ, ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ ನಿಯಮಗಳು 1993ರ ನಿಯಮ 12ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ.

ಜಿಲ್ಲಾಧಿಕಾರಿಗಳು, ಅಯೋಗವು ಆದೇಶಿಸಿರುವ ಮೇಲ್ಕಂಡ ಚುನಾವಣಾ ವೇಳಾಪಟ್ಟಿಯನ್ನು ಅನುಸರಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993ರ ನಿಯಮ 12ರ ಅಡಿಯಲ್ಲಿ ಚುನಾವಣಾ ಅಧಿಸೂಚನೆಯನ್ನು ಪ್ರಪತ್ರ-2 ರಲ್ಲಿ ಹೊರಡಿಸತಕ್ಕದ್ದು ಹಾಗೂ ಹೊರಡಿಸಲಾದ ಆಧಿಸೂಚನೆಯನ್ನು ಅದೇ ದಿನದಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು. ಪ್ರಕಟಿಸಿದ ಅಧಿಸೂಚನೆ ಪ್ರತಿಗಳನ್ನು

ಅಧಿಸೂಚನೆಯ ಪ್ರತಿಯನ್ನು ಅಂದೇ ಚುನಾವಣಾಧಿಕಾರಿಗಳಿಗೆ ಕಳುಹಿಸಿಕೊಟ್ಟು ಅದೇ ದಿನದಂದು ಚುನಾವಣಾಧಿಕಾರಿಗಳು ಪ್ರಪತ್ರ-3 ರಲ್ಲಿ ಚುನಾವಣಾ ನೋಟೀಸನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿ, ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸೂಚಿಸುವುದು ಹಾಗೂ ಚುನಾವಣಾ ನೋಟೀಸಿನಲ್ಲಿ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಹೆಸರು, ಕ್ಷೇತ್ರದ ಹೆಸರು, ಸದಸ್ಯ ಸ್ಥಾನಗಳ ಸಂಖ್ಯೆ, ಮೀಸಲಾತಿ ವಿವರಗಳನ್ನು ಸ್ಪಷ್ಟವಾಗಿ ನಮೂದಿಸುವಂತೆ ಸೂಚನೆಗಳನ್ನು ನೀಡತಕ್ಕದ್ದು.

ದಿನಾಂಕ: 10.5.2025 ರಂದು ಎರಡನೇ ಶನಿವಾರ ನೆಗೋಷಿಯೇಬಲ್ ಇನ್ಸ್ಟು ಮೆಂಟ್ ಕಾಯ್ದೆಯಡಿಯಲ್ಲಿ ಘೋಷಿಸಲ್ಪಟ್ಟ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಸದರಿ ದಿನದಂದು ಯಾವುದೇ ನಾಮಪತ್ರವನ್ನು ಸ್ವೀಕರಿಸದಂತೆ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡುವುದು.

ಬೀದ‌ರ್ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಇ.ಸಿ.ಐ.ಎಲ್. ಹೈದರಾಬಾದ್ ರವರು ತಯಾರಿಸಿರುವ ಮಲ್ವಿಚಾಯ್ಸ್ ವಿದ್ಯುನ್ಮಾನ ಮತ ಯಂತ್ರದ (E.V.M.) ಮೂಲಕ ಚುನಾವಣೆ ನಡೆಸಲು ಆದೇಶಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ: 08.5.2025 ರಿಂದ ದಿನಾಂಕ: 28.5.2025 ರವರೆಗೆ ಜಾರಿಯಲ್ಲಿರುತ್ತದೆ.

PDF DOWNLOAD – CLICK HERE

WhatsApp Group Join Now
Telegram Group Join Now