Indian Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ 300 ಪೋಸ್ಟ್‌ಗೆ ಭರ್ಜರಿ ನೇಮಕಾತಿ -2024.
Indian Bank Jobs: ಇಂಡಿಯನ್ ಬ್ಯಾಂಕ್ (Indian Bank) ತನ್ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಇಂಡಿಯನ್ ಬ್ಯಾಂಕ್‌ನಲ್ಲಿ (Indian Bank) ಒಟ್ಟು 300 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ 2ರೊಳಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೆ, ನೀವು ಕರ್ನಾಟಕ ರಾಜ್ಯದಲ್ಲಿಯೇ ಬ್ಯಾಂಕ್ ಹುದ್ದೆ ಪಡೆಯಬಹುದಾಗಿದೆ. ಈ ಸುವರ್ಣ ಅವಕಾಶ ಮಿಸ್ ಮಾಡದಂತೆ ಬ್ಯಾಂಕ್ ಮನವಿ ಮಾಡಿಕೊಂಡಿದೆ. ಅಗತ್ಯ ಮಾಹಿತಿ ಈ ಕೆಳಗಿನಂತಿದೆ.
ನೇಮಕಾತಿ ಪೂರ್ಣ ಮಾಹಿತಿ.
ನೇಮಕಾತಿ ಸಂಸ್ಥೆ –
ಇಂಡಿಯನ್ ಬ್ಯಾಂಕ್.
ಹುದ್ದೆಗಳ ಹೆಸರು:-
ಲೋಕಲ್ ಬ್ಯಾಂಕ್ ಅಧಿಕಾರಿ.
ಒಟ್ಟು ಹುದ್ದೆಗಳು:-
300.
ಪೋಸ್ಟಿಂಗ್ ಎಲ್ಲಿ – ಕರ್ನಾಟಕ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: – ಸೆಪ್ಟೆಂಬರ್ 02
ಮಾಸಿಕ ವೇತನ: – ₹48480 ನಿಂದ 85920
ಶೈಕ್ಷಣಿಕ ಅರ್ಹತೆ:-
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೆ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರುವಂತೆ ಸೂಚಿಸಿದೆ.
ವಯಸ್ಸಿನ ಮಿತಿ ವಿವರ:-
ಅರ್ಜಿ ಸಲ್ಲಿಸಲಿರುವ ಅರ್ಹ ಅಭ್ಯರ್ಥಿಗಳ ವಯಸ್ಸು ಕಳೆದ ತಿಂಗಳು ಜುಲೈ 1ಕ್ಕೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು. ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು 03 ವರ್ಷ, ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ ಐದು 05 ವರ್ಷ ಹಾಗೂ ಪಿಡಬ್ಲುಡಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ಅರ್ಜಿ ಶುಲ್ಕದ ಮಾಹಿತಿ:-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 175 ರೂ.ನಿಗದಿ ಮಾಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ ರೂ.1000 ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಈ ಹಣವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ:-
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಂಡಿಯನ್ ಬ್ಯಾಂಕ್ ಮೊದಲು ಲಿಖಿತ ಪರೀಕ್ಷೆ ನಡೆಸಲಿದೆ. ನಂತರ ಆನ್‌ಲೈನ್ ಮೂಲಕ ಮತ್ತೊಂದು ಟೆಸ್ಟ್ ನಡೆಸಿ ಅಲ್ಲಿ ಆಯ್ಕೆ ಆಗುವವರಿಗೆ ನೇರವಾಗಿ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಿದೆ. ನಂತರ ಅವರಿಗೆ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ರಾಜ್ಯಗಳಲ್ಲಿ ಪೋಸ್ಟಿಂಗ್ ಸಿಗಲಿದೆ.
ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಇಲ್ಲಿನ ಲಿಂಕ್ ಐಬಿಪಿಎಸ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://ibpsonline.ibps.in/iblbojul24/ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಧನ್ಯವಾದಗಳು……