Indian Post: ಅಂಚೆ ಇಲಾಖೆ ನೇಮಕಾತಿ,ಬಳ್ಳಾರಿಯಲ್ಲಿ ಡಿಸೆಂಬರ್ 16ಕ್ಕೆ ನೇರ ಸಂದರ್ಶನ ಸಂಪೂರ್ಣ ಮಾಹಿತಿ ಇಲ್ಲಿದೆ -2024.
Indian Post: ಬಳ್ಳಾರಿಯಲ್ಲಿ ಕೆಲಸ ಹುಡುಕುತ್ತಿರುವ ಯುವಕ ಯುವತಿಯರಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ಗಳ ನೇಮಕಕ್ಕೆ ಡಿಸೆಂಬರ್ 16ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಯುವಕ ಯುವತಿಯರು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಡಿಸೆಂಬರ್ 16ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳ್ಳಾರಿ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇರ ಸಂದರ್ಶನಕ್ಕೆ ನೋಂದಣಿಯು ಬೆಳಗ್ಗೆ 10:30 ರಿಂದ 11:30 ರ ವರೆಗೆ ನಡೆಯಲಿದೆ.
Indian Post: ಅರ್ಹತೆ, ಇತರ ವಿವರಗಳು:
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 5000 ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ SSLC ಉತ್ತೀರ್ಣರಾಗಿರಬೇಕು. 5000 ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಲ್ಲಿ ಇದ್ದರೆ 2 PUC ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳು ಬಳ್ಳಾರಿ ಹಾಗೂ ವಿಜಯನಗರ(ಹೊಸಪೇಟೆ) ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುವ ವಿಳಾಸದ ದಾಖಲೆಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ನೇರಪ್ರತಿನಿಧಿಗಳ ಹುದ್ದೆಗೆ ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರು.
ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರು. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ರೂ. 5000ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿ ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ಸಂದರ್ಶನಕ್ಕೆ ಬೇಕಾಗುವ ದಾಖಲೆಗಳು .
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರ, SSLC ಮತ್ತು 2PUC, ಪದವಿ ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಡೆವಲಪ್ಮೆಂಟ್ ಆಫೀಸರ್ 9481694420 ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 08392-266768 ಸಂಪರ್ಕಿಸಬಹುದು.
Indian Post: Postal Department Recruitment, Direct Interview on 16th December in Bellary – 2024 is here.
Indian Post: There is an important information for young men and women who are looking for a job in Bellary. Direct interview scheduled on 16th December for the appointment of Direct Representative and Field Officers to sell Postal Life Insurance and Rural Postal Life Insurance products. Eligible and interested youths can attend interview with necessary documents.
On December 16 from 10 am to 2 pm, a live interview has been scheduled at the office of the Superintendent of Posts, Fort Precinct, Bellary city.
Eligible candidates can attend the live interview with their recent photograph and educational certificate documentation. Registration for this live interview will be held from 10:30 am to 11:30 am.
- Click here…
ಕರ್ನಾಟಕದ ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ 2024-25.
Indian Post: Eligibility, Other Details:
Candidates attending the direct interview should have passed SSLC if they reside in an area with less than 5000 population. 2 PUC must be passed if in other areas with population of 5000 and above.
Candidates should have residential address document within Bellary and Vijayanagar (Hospet) district. Minimum age limit for candidates is 18 years, no upper age limit.
Unemployed and self-employed youth, former insurance company consultants, Anganwadi workers, women council workers, former Gram Panchayat members are eligible for the post of direct representatives.
Retired Central and State Government Employees, Retired Rural Postal Servants (GDS) are eligible for the post of Field Officer. Must have experience selling insurance products, computer knowledge or knowledge of local area.
Selected candidates will get Rs. 5000 as a security deposit in the form of National Savings Certificate or Kisan Vikas Certificate. Selected direct representative and field officers will be paid suitable commission according to the business done by them. Apart from this there is no fixed salary. Candidate should not be an agent of any other insurance company, organization, association.
Documents required for interview.
Candidate appearing for direct interview should submit Aadhaar card, PAN card, 2 passport size photographs, SSLC and 2PUC, degree mark sheet documents.
Interested can contact Development Officer 9481694420 and Office of Superintendent of Posts or phone number 08392-266768 for more information.