Karnataka Rains Imd: ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆ!
Karnataka Rains Imd:ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿದೆ. ಈ ಕಾರಣದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಏಪ್ರಿಲ್ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮತ್ತು ಯಾವ ದಿನ ಮಳೆಯಾಗಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ರಣಭೀಕರ ಸ್ವರೂಪ ಪಡೆದುಕೊಂಡಿದೆ. ಇನ್ನೂ ಒಂದು ವಾರ ಹೆಚ್ಚು ಅವಧಿ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಮಳೆ ಆಗಲಿದೆ. ಮಂಗಳವಾರವೂ ಕರ್ನಾಟಕದ ವಿವಿಧ ಭಾಗದಲ್ಲಿ ಭರ್ಜರಿ ಮಳೆಯಾಗಿದ್ದು. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೂ ಕೆಲವು ಭಾಗದಲ್ಲಿ ಬಿಸಿಲನ ಪ್ರಮಾಣವು ಹೆಚ್ಚಿರುತ್ತದೆ. ಆದರೆ ನಿರಂತರವಾಗಿ ಮಳೆಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಬಿಸಿಲ ಝಳ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ.
1.ಏಪ್ರಿಲ್ 9ಕ್ಕೆ ಈ ಭಾಗದಲ್ಲಿ ಮಳೆ:- ಬುಧವಾರ ಕರ್ನಾಟಕದ ವಿವಿಧ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾರ್ಭಟ ಇರಲಿದೆ ಅಂತ ಐಎಂಡಿ ರಿಪೋರ್ಟ್ ತಿಳಿಸಿದೆ.
2.ಏಪ್ರಿಲ್ 10ಕ್ಕೆ:- ಇನ್ನು ಏಪ್ರಿಲ್ 10ಕ್ಕೆ ಅಂದರೆ ಗುರುವಾರ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಗದಗ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
3.ಏಪ್ರಿಲ್ 11ಕ್ಕೆ:- ಏಪ್ರಿಲ್ 11 ಶುಕ್ರವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ವಿಜಯಪುರ, ಯಾದಗಿರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಮತ್ತು ಕೊಡುಗ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇದರೊಂದಿಗೆ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯನ್ನು ತಿಳಿಸಿದೆ.
4.ಏಪ್ರಿಲ್ 12ಕ್ಕೆ:- ಕರ್ನಾಟಕದಲ್ಲಿ ಈ ವಾರದೊಳಗೆ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ವಾರಾಂತ್ಯವೂ ಭರ್ಜರಿ ಮಳೆ ಇರಲಿದೆ. ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
5.ಏಪ್ರಿಲ್ 17ರ ವರೆಗೆ ಮಳೆ:- ಇನ್ನೂ ಕರ್ನಾಟಕದಲ್ಲಿ ಏಪ್ರಿಲ್ 17ರ ವರೆಗೆ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಮಂಗಳವಾರ ಮತ್ತು ಬುಧವಾರವೂ ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗಿದೆ.