Karnataka SSLC-3: ಎಸ್.ಎಸ್.ಎಲ್.ಸಿ-1,2 ಪರೀಕ್ಷೆ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ – 3ಕ್ಕೆ ಪ್ರಮುಖ ಮಾಹಿತಿ ಇಲ್ಲಿದೆ.

Karnataka SSLC-3: ಎಸ್.ಎಸ್.ಎಲ್.ಸಿ-1,2 ಪರೀಕ್ಷೆ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ – 3ಕ್ಕೆ ಪ್ರಮುಖ ಮಾಹಿತಿ ಇಲ್ಲಿದೆ.

Karnataka SSLC-3

Karnataka SSLC-3:ಮೇಲೆ ಓದಲಾದ ಕ್ರಮಾಂಕ (1) ರಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು ದಿನಾಂಕ:21.03.2025 ರಿಂದ 04.04.2025ರವರೆಗೆ ನಡೆಸಲಾಗಿದ್ದು, ದಿನಾಂಕ:02.05.2025ರಂದು ಫಲಿತಾಂಶವನ್ನು ಪ್ರಕಟಿಸಲಾಗಿರುತ್ತದೆ. 20250 ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಕುರಿತು ದಿನಾಂಕ:02.05.2025ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಮತ್ತು 3ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಿರುವುದಾಗಿ ಪ್ರಕಟಿಸಲಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಈಗಾಗಲೇ ಶುಲ್ಕವಿನಾಯಿತಿ ಇದ್ದು, ಸದರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಂದ ಸ್ವೀಕೃತವಾಗುವ ಪರೀಕ್ಷಾ ಶುಲ್ಕದ ಅಂಕಿಅಂಶ ಕೆಳಕಂಡಂತಿದೆ.

GOVT ORDER PDF – CLICK HERE

ಮುಂದುವರೆದು, ಸದರಿ ವಿದ್ಯಾರ್ಥಿಗಳಿಂದ ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಿದ್ದಲ್ಲಿ ಮೇಲ್ಕಂಡಂತೆ ಅಂದಾಜು ರೂ.12.68 ಕೋಟಿ ಮೊತ್ತವು ಮಂಡಲಿಗೆ ಹೊರೆಯಾಗುತ್ತದೆ. ಈ ಸಂಬಂಧ ಸದರಿ ಮೊತ್ತವನ್ನು ಸರ್ಕಾರದಿಂದ ಮರುಭರಣ ಮಾಡಲು ಕೋರಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಏಕ ಕಡತದಲ್ಲಿ ಸಲ್ಲಿಸಲಾಗಿರುತ್ತದೆ. ಅದರಂತೆ ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

Karnataka SSLC-3:ಸರ್ಕಾರದ ಆದೇಶ ಸಂಖ್ಯೆ:ಇಪಿ 188 ಎಸ್ಎಲ್‌ಬಿ 2025, ಬೆಂಗಳೂರು, ದಿನಾಂಕ: 17.06.2025.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿಗೆ ಮಾತ್ರ ಸೀಮಿತಗೊಳಿಸಿ 2025 ರ ಎಸ್ಎಸ್ಎಲ್‌ಸಿ ಪರೀಕ್ಷೆ – 1 ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಮತ್ತು 3 ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲು ಸರ್ಕಾರದ ಸಹಮತಿ ನೀಡಿದೆ.

ಮುಂದುವರೆದು, ಸದರಿ ಪರೀಕ್ಷಾ ಶುಲ್ಕದ ವಿನಾಯಿತಿಯಿಂದ ಉಂಟಾಗುವ ಆರ್ಥಿಕ , ಹೊರೆಯನ್ನು KARNATAKA SCHOOL EXAMINATION AND ASSESSMENT BOARD ಇದರ ಆಂತರಿಕ ಸಂಪನ್ಮೂಲದಿಂದ ಭರಿಸುವಂತೆ ಸಹ ತಿಳಿಸಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ:ಆಇ 455 ವೆಚ್ಚ-8/2025 ದಿನಾಂಕ:05.06.2025 ರಲ್ಲಿ ನೀಡಿದ ಸಹಮತಿ ಮೇರೆಗೆ ಹೊರಡಿಸಲಾಗಿದೆ.

WhatsApp Group Join Now
Telegram Group Join Now