ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಪ್ರೆಂಟಿಸ್ ತರಬೇತಿ: ಶಿಷ್ಯ ವೇತನ, ಹುದ್ದೆಗಳ ವಿವರ-2024-25.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಸನದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಪ್ರಾದೇಶಿಕ ಕಾರ್ಯಗಾರ ಹಾಸನ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 23 ರಂದು ಬೆಳಗ್ಗೆ ಅರ್ಜಿಗಳನ್ನು ಸಲ್ಲಿಕೆ ಮಾಡಿ, ಆಯ್ಕೆ ಸಮಿತಿ ಮುಂದೆ ಸಂದರ್ಶನಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ( ಕೆಎಸ್ಆರ್‌ಟಿಸಿ) SSLC ಯೊಂದಿಗೆ ITI ವಿಭಾಗದಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಸೀಟ್ ಮೆಟಲ್ ವರ್ಕ್ ಮತ್ತು ಪಾಸಾ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಕರೆದಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 40 ವರ್ಷಗಳು ಎಂದು ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಶಿಷ್ಯ ವೇತನವನ್ನು ನೀಡಲಾಗುತ್ತದೆ.
ತರಬೇತಿ ಪಡೆಯಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಕ.ರಾ.ರ.ಸಾ.ನಿ, ಪ್ರಾದೇಶಿಕ ಕಾರ್ಯಗಾರ ಹಾಸನ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 23ರಂದು ಬೆಳಗ್ಗೆ 11 ಗಂಟೆಗೆ ಕ.ರಾ.ರ.ಸಾ.ನಿ, ಪ್ರಾದೇಶಿಕ ಕಾರ್ಯಗಾರ ಹಾಸನ ಇಲ್ಲಿ ಆಯ್ಕೆ ಸಮಿತಿ ಮುಂದೆ ಸಂದರ್ಶನಕ್ಕೆ ಹಾಜರಾಗಬೇಕು.
ಅರ್ಜಿ ಸಲ್ಲಿಸುವವರು ನಿಗದಿತ ಅರ್ಜಿ ನಮೂನೆಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಪ.ಜಾತಿ/ ಪ.ಪಂಗಡ/ ಓ.ಬಿ.ಸಿ/ ಅಂಗವಿಕಲ ಸರ್ಟಿಫೀಕೆಟ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಪಾಸ್ ಪೋರ್ಟ್ ಅಳತೆಯಭಾವಚಿತ್ರಗಳೊಂದಿಗೆ ಮೂಲ ದಾಖಲೆಗಳು ಮತ್ತು ಜೆರಾಕ್ಸ್ ಪ್ರತಿಯೊಂದಿಗೆ ನಿಗದಿತ ದಿನಾಂಕದಂದು ಹಾಜರಾಗಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08172-296374.
[url=https://sweet-bonanza-casino-play.ru]http://www.sweet-bonanza-casino-play.ru[/url]
last news about sweet bonanza casino
http://www.sweet-bonanza-casino-play.ru