KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ-2024.

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ-2024.

KAS Prelims Exam: ಲೋಕಸಭಾ ಚುನಾವಣೆ ಸೇರಿ ವಿವಿಧ ಕಾರಣಗಳಿಂದ ಹಲವು ಬಾರಿ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆಯನ್ನು(KAS Recruitment 2024) ಆ.25ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಮತ್ತೆ ಎರಡು ದಿನಗಳ ಕಾಲ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದೂಡಿದೆ.

  2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ (KAS Prelims Exam) ಮತ್ತೆ ಮುಂದೂಡಿಕೆಯಾಗಿದೆ. ಒಂದೇ ದಿನ ಬ್ಯಾಂಕಿಂಗ್‌ ಪರೀಕ್ಷೆ ಹಾಗೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದರಿಂದ ಎರಡು ದಿನಗಳ ಕಾಲ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಅಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಅವರೊಂದಿಗೆ ಚರ್ಚಿಸಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಪತ್ರ.

ಆ.27 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ 564 ಪರೀಕ್ಷಾ ಉಪಕೇಂದ್ರಗಳಿಗೆ ಒಂದು ದಿವಸದ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಿ, ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವಂತೆ ಅನುವು ಮಾಡಿಕೊಡಬೇಕು ಹಾಗೂ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಸರ್ಕಾರದ ಕಾರ್ಯದರ್ಶಿ ರಣದೀಪ್‌ ಡಿ. ಅವರಿಗೆ ಪತ್ರ ಬರೆದಿದ್ದಾರೆ.

     ಧನ್ಯವಾದಗಳು….

WhatsApp Group Join Now
Telegram Group Join Now