KEA: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ -2024.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.
KEA: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ (ಸೆ.1) ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಸಕಲ ಸಿದ್ಧತೆ ಮಾಡಿಕೊಂಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna), ಹೈದರಾಬಾದ್ ಕರ್ನಾಟಕದವರಿಗಾಗಿ (Hyderabad Karnataka) ಜು.14 ರಂದು ಪರೀಕ್ಷೆ ನಡೆಸಲಾಗಿತ್ತು. ಹೈದರಾಬಾದ್ ಕರ್ನಾಟಕವಲ್ಲದ ಇತರರಿಗೆ ಭಾನುವಾರ ಸೆ.1 ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಪರೀಕ್ಷೆಯಲ್ಲಿ ಹೈದರಾಬಾದ್ ಕರ್ನಾಟಕದವರೂ ಬರೆಯಬಹುದು ಎಂದು ಹೇಳಿದ್ದಾರೆ.
ಈ ಪರೀಕ್ಷೆಗೆ 23,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ (Dress Code) ಇದ್ದು, ಆ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.
ಬೆಂಗಳೂರು, ಬಳ್ಳಾರಿ, ಧಾರವಾಡ, ಕಲಬುರಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಧನ್ಯವಾದಗಳು…….