KPSC Recruitment 2024: ನೇಮಕಾತಿ- ಸರ್ಕಾರಿ ಕೆಲಸ ಹುಡುಕ್ತಿದ್ರೆ ಇಲ್ಲಿದೆ ನೋಡಿ ಬಂಪರ್‌ ಅವಕಾಶ.

KPSC Recruitment 2024: ನೇಮಕಾತಿ- ಸರ್ಕಾರಿ ಕೆಲಸ ಹುಡುಕ್ತಿದ್ರೆ ಇಲ್ಲಿದೆ ನೋಡಿ ಬಂಪರ್‌ ಅವಕಾಶ.

KPSC Recruitment 2024:

  ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.

  KPSC Recruitment 2024: ಸೆಪ್ಟೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್‌ಲೈನ್‌ ಮೂಲಕ ಅಪ್ಲೈ ಮಾಡಬೇಕು. ಸೆಪ್ಟೆಂಬರ್‌ 5, 2024ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.

   KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಲೀಗಲ್‌ ಅಡ್ವೈಸರ್‌​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್‌ಲೈನ್‌ ಮೂಲಕ ಅಪ್ಲೈ ಮಾಡಬೇಕು. ಸೆಪ್ಟೆಂಬರ್‌ 5, 2024ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  ವಯೋಮಿತಿ:

  ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್‌ 5, 2024ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

     ವೇತನ:

  ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 1,15,000 ರೂ. ಸಂಬಳ ಕೊಡಲಾಗುತ್ತದೆ.

  ಉದ್ಯೋಗದ ಸ್ಥಳ:

  ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

1. ಲಿಖಿತ ಪರೀಕ್ಷೆ
2. ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/09/2024.
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್‌ 20, 2024.

    ಅರ್ಜಿ ಹಾಕೋದು ಹೇಗೆ?:

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.

            ಕಾರ್ಯದರ್ಶಿ
  ಕರ್ನಾಟಕ ಲೋಕಸೇವಾ ಆಯೋಗ
        ಉದ್ಯೋಗ ಸೌಧ
     ಬೆಂಗಳೂರು-560001.

ಧನ್ಯವಾದಗಳು……

WhatsApp Group Join Now
Telegram Group Join Now

1 thought on “KPSC Recruitment 2024: ನೇಮಕಾತಿ- ಸರ್ಕಾರಿ ಕೆಲಸ ಹುಡುಕ್ತಿದ್ರೆ ಇಲ್ಲಿದೆ ನೋಡಿ ಬಂಪರ್‌ ಅವಕಾಶ.”

Leave a Comment