KPSC:ಕೆಪಿಎಸ್‌ಸಿ ಗ್ರೂಪ್‌ ಬಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ: ಡೌನ್‌ಲೋಡ್‌ ಲಿಂಕ್, ವಿಧಾನ ಇಲ್ಲಿದೆ..-2024.

    KPSC:ಕೆಪಿಎಸ್‌ಸಿ        ಗ್ರೂಪ್‌ ಬಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ: ಡೌನ್‌ಲೋಡ್‌ ಲಿಂಕ್, ವಿಧಾನ ಇಲ್ಲಿದೆ..-2024.

KPSC:

 

 KPSC:  ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್‌ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧ, ಇದೀಗ ಎಕ್ಸಾಮ್‌ ಕಾಲ್‌ ಲೆಟರ್‌ ಬಿಡುಗಡೆ ಮಾಡಲಾಗಿದೆ. ಈ ಸೆಪ್ಟೆಂಬರ್ 14, 15 ರಂದು ಪರೀಕ್ಷೆ ಬರೆಯಲಿರುವವರು ಅಡ್ಮಿಟ್‌ ಕಾರ್ಡ್‌ ಅನ್ನು ಈಗ ಡೌನ್‌ಲೋಡ್ ಮಾಡಿಕೊಳ್ಳಿ.

   ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್‌ ಬಿ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಿದೆ.

   ದಿನಾಂಕ 13-03-2024 ರ ಅಧಿಸೂಚನೆಯಲ್ಲಿನ ವಿವಿಧ ಗ್ರೂಪ್‌ -ಬಿ ಹುದ್ದೆಗಳಿಗೆ ದಿನಾಂಕ 14-09-2024 ಮತ್ತು 15-09-2024 ರಂದು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಜಾರಿ ಮಾಡಲಾಗಿದ್ದ ಪ್ರವೇಶ ಪತ್ರಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಕೆಲವು ಅಭ್ಯರ್ಥಿಗಳ ಪರೀಕ್ಷಾ ಉಪಕೇಂದ್ರಗಳ ಹಂಚಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸದರಿ ತಾಂತ್ರಿಕ ಸಮಸ್ಯೆಯನ್ನು ಪ್ರಸ್ತುತ ಬಗೆಹರಿಸಲಾಗಿದ್ದು, ಈಗಾಗಲೇ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡಿರುವ ಅಭ್ಯರ್ಥಿಗಳು ಸೇರಿದಂತೆ ಎಲ್ಲ ಅಭ್ಯರ್ಥಿಗಳು ಹೊಸದಾಗಿ ಪ್ರವೇಶ ಪತ್ರವನ್ನು ಡೌನ್‌ಲೊಡ್‌ ಮಾಡಿಕೊಳ್ಳುವಂತೆ ಈ ಮೂಲಕ ತಿಳಿಸಲಾಗಿದೆ.

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡುವುದು ಹೇಗೆ?:

  ಕೆಪಿಎಸ್‌ಸಿ ವೆಬ್‌ಸೈಟ್ https://kpsconline.karnataka.gov.in/HomePage/index.html# ವೆಬ್‌ಸೈಟ್‌ಗೆ ಭೇಟಿ ನೀಡಿ.- ತೆರೆದ ಹೋಮ್‌ಪೇಜ್‌ನಲ್ಲಿ ‘Login’ ಎಂದಿರುವಲ್ಲಿ ಕ್ಲಿಕ್ ಮಾಡಿ- ಯೂಸರ್ ನೇಮ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್‌ ಆಗಿ.- ಪ್ರವೇಶ ಪತ್ರ ಪ್ರದರ್ಶನವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

   ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ಓದಿಕೊಳ್ಳಿ. ಪ್ರವೇಶ ಪತ್ರದ ಜತೆಗೆ ಅಧಿಕೃತ ಗುರುತಿನ ಚೀಟಿಯನ್ನು – ಯಾವುದಾದರೊಂದನ್ನು ತೆಗೆದುಕೊಂಡು ಹೋಗಬೇಕು. ಹಾಗೂ ಆಯೋಗ ನಿಗದಿತ ವಸ್ತ್ರಸಂಹಿತೆ ಅನುಸರಿಸಿ.

 ಪರೀಕ್ಷೆಗೆ ಹಾಜರಾಗುವವರಿಗೆ ವಸ್ತ್ರಸಂಹಿತೆ ಮಾರ್ಗಸೂಚಿಗಳು:

 

ಪರೀಕ್ಷೆ ಕೊಠಡಿಯೊಳಗೆ ಆಧುನಿಕ ಉಪಕರಣಗಳಾದ ಮೊಬೈಲ್‌, ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಿಡ್, ವೈರ್‌ಲೆಸ್‌ ಸೆಟ್ಸ್‌, ಪೇಪರ್, ಬುಕ್‌ಗಳನ್ನು ತೆಗೆದುಕೊಂಡು ಹಾಜರಾಗುವಂತಿಲ್ಲ.

ಪರೀಕ್ಷಾರ್ಥಿಗಳು ತುಂಬು ತೋಳಿನ ಶರ್ಟ್‌ ಮತ್ತು ಯಾವುದೇ ಆಭರಣಗಳನ್ನು (ಮಂಗಳ ಸೂತ್ರ ಮತ್ತು ಕಾಲುಂಗುರವನ್ನು ಹೊರತುಪಡಿಸಿ), ಪುಲ್‌ವೋವರ್ಸ್‌, ಜಾಕೆಟ್‌ ಮತ್ತು ಸ್ವೆಟರ್ ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಿದೆ.

ಪರೀಕ್ಷಾರ್ಥಿಗಳು ಮೆಟಲ್ ವಾಟರ್ ಬಾಟೆಲ್‌ ಅಥವಾ ನಾನ್‌ ಟ್ರಾನ್ಸ್‌ಪರೆಂಟ್ ವಾಟರ್ ಬಾಟಲ್ ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಪರೀಕ್ಷಾರ್ಥಿಗಳು ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್‌ ಮಾಸ್ಕ್‌ ಅನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ.

ಪರೀಕ್ಷಾ ಕೇಂದ್ರದೊಳಗೆ ಹಾಜರಾಗುವ ಮುನ್ನ ಹ್ಯಾಂಡ್ ಹೆಲ್ಡ್‌ ಮೆಟಲ್ ಡಿಟೆಕ್ಟರ್ ಮುಖಾಂತರ ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳಿಂದ ಫ್ರಿಸ್ಕಿಂಗ್ ಕಾರ್ಯವನ್ನು ನೆರವೇರಿಸಲಾಗುತ್ತಿದೆ.

ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹಂತದ ವೀಕ್ಷಕರನ್ನು ನೇಮಿಸಲು ಕ್ರಮವಹಿಸಲಾಗಿದೆ.

ಈ ಮೇಲಿನ ಎಲ್ಲ ಸೂಚನೆಗಳನ್ನು ಕಡ್ಡಾಯವಾಗಿ ಅಭ್ಯರ್ಥಿಗಳು ಪಾಲಿಸಬೇಕು. ಹಾಗೂ ಗಮನದಲ್ಲಿ ಇಟ್ಟುಕೊಂಡು ಪರೀಕ್ಷೆ ಬರೆಯಬೇಕಿದೆ.

ಅಭ್ಯರ್ಥಿಗಳು ಮೇಲಿನ ಸೂಚನೆಗಳನ್ನು ಕಡ್ಡಾಯ ಪಾಲಿಸಬೇಕು.

ಧನ್ಯವಾದಗಳು…….

 

WhatsApp Group Join Now
Telegram Group Join Now