KSET- 2024: ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮತ್ತೆ ವಿಸ್ತರಣೆ.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.
KSET-2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಸೆಟ್ 2024 ಅನ್ನು ನವೆಂಬರ್ 24, 2024 ರಂದು ನಡೆಸಲು ದಿನಾಂಕ ನಿಗದಿಪಡಿಸಿದೆ. ಈ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತೊಮ್ಮೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಇನ್ನು ಅರ್ಜಿ ಹಾಕದ ಅಭ್ಯರ್ಥಿಗಳು ಈಗ ಕೊನೆಕ್ಷಣದವರೆಗೆ ಅರ್ಜಿ ಹಾಕಿ.
ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ನಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 28.08.2024 ರ ವರೆಗೆ ವಿಸ್ತರಿಸಲಾಗಿತ್ತು. ಅದಾಗ್ಯೂ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕೊನೆಯ ಅವಕಾಶವಾಗಿ ಈ ಕೆಳಕಂಡಂತೆ ಮತ್ತೊಮ್ಮೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 02.09.2024ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03.09.2024
ಪ್ರಮುಖ ಸೂಚನೆ:
1. ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳಿಗಾಗಿ ದಿನಾಂಕ 13.07.2024 ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ.
2. ಅರ್ಜಿ ಸಲ್ಲಿಕೆಗೆ ಇದು ಅಂತಿಮ ಹಾಗೂ ಕೊನೆಯ ಅವಕಾಶವಾಗಿರುತ್ತದೆ.
- ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಲಿಂಕ್:https://cetonline.karnataka.gov.in/kea/kset2024
ಧನ್ಯವಾದಗಳು…….