KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ.

KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ.

ಆಡಳಿತಾಧಿಕಾರಿ

 

ಮೇಲೆ ಓದಲಾದ ಪತ್ರಗಳಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ಕೋರಿರುತ್ತಾರೆ.

ಮೇಲ್ಕಂಡ ಅಂಶಗಳನ್ನು ಪರಿಶೀಲಿಸಲಾಗಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಈ ಸಂಘವು ಬೃಹತ್ ಸಂಘವಾಗಿದ್ದು ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರವು ತೀರ್ಮಾನಿಸಿದೆ. ಅದರಿಂದ ಈ ಆದೇಶ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರ ಕಲಂ 27-ಎ ರನ್ವಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು-560001, ಈ ಸಂಘಕ್ಕೆ ಶ್ರೀ. ಸಿ.ಎನ್. ಮಂಜುನಾಥ್, ಕೆ.ಎ.ಎಸ್‌(ಆಯ್ಕೆ ಶ್ರೇಣಿ), ಪ್ರಧಾನ ವ್ಯವಸ್ಥಾಪಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಇವರನ್ನು ಈ ಆದೇಶ ಹೊರಡಿಸಿದ ದಿನಾಂಕದಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಿದೆ.

ಧನ್ಯವಾದಗಳು….

Click here…

WhatsApp Group Join Now
Telegram Group Join Now

Leave a Comment