Maulana Azad:2025-26ನೇ ಶೈಕ್ಷಣಿಕ ಸಾಲಿನ ಮೌಲಾನಾ ಆಜಾದ್(Maulana Azad) ಮಾದರಿ ಶಾಲೆಗಳ ಪ್ರವೇಶಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
Maulana Azad:ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿ ಅಧಿಸೂಚನೆ ಹೊರಡಿಸುವ ಬಗ್ಗೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 250 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಪ್ರಸ್ತುತ ಸದರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಮುಂದುವರೆದು, 2025-26ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು “ಸೇವಾ ಸಿಂಧು ಪೋರ್ಟಲ್” ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೌಲಾನಾ ಆಜಾದ್ ಮಾದರಿ ಶಾಲೆಗಳ 6ನೇ ಸಲ್ಲಿಸಬಹುದಾಗಿರುತ್ತದೆ. ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು
ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ ಪ್ರವೇಶಾತಿ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು. ಸದರಿ ಅಧಿಸೂಚನೆಯ ಪತ್ರಿಕಾ ಪ್ರಕಟಣೆ ಹೊರಡಿಸಿ, ವ್ಯಾಪಕ ಪ್ರಚಾರ ಕೈಗೊಳ್ಳುವುದು. ನಿಯಾಮಾನುಸಾರ ಮೆರಿಟ್ ಹಾಗೂ ರೋಸ್ಟರ್ ಪದ್ಧತಿ ಪ್ರಕಾರ 6ನೇ ತರಗತಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ತಮ್ಮ ಅಧೀನದ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿ ದಾಖಲಾತಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವುದು.
ಮುಂದುವರೆದು, ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆಯ ಪ್ರಕ್ರಿಯೆ, ಮೀಸಲಾತಿ ವಿವರ, ವೇಳಾಪಟ್ಟಿ ಮತ್ತು ದಾಖಲಾತಿಗೆ ಸಂಬಂಧಿಸಿದ ಇತರೆ ವಿವರಗಳ ಸಂಪೂರ್ಣ ಮಾರ್ಗಸೂಚಿಗಳನ್ನು ಸದರಿ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿದ್ದು, ಅದರಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಶೇ.100 ರಷ್ಟು ದಾಖಲಾತಿಯನ್ನು ಸಾಧಿಸಲು ಸೂಚಿಸಿದೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅರ್ಜಿಗಳನ್ನು ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಕಛೇರಿಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.05.2025.
ಹೆಚ್ಚಿನ ವಿವರಗಳಿಗಾಗಿ ನಿರ್ದೇಶನಾಲಯದ ಅಧಿಕೃತ Website: https://dom.karnataka.gov.in ಸಂಪರ್ಕಿಸಬಹುದು.