ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಶೀಘ್ರದಲ್ಲೇ ಪ್ರಕಟ -2024-25.

ಶಿಕ್ಷಕರ ನೇಮಕಾತಿಗೆ  ಅಧಿಸೂಚನೆ ಶೀಘ್ರದಲ್ಲೇ ಪ್ರಕಟ -2024-25.

ಶಿಕ್ಷಕರ

 

ಶಿಕ್ಷಕರ ನೇಮಕಾತಿ ಮೇಲೆ ಓದಲಾದ ಕ್ರಮಾಂಕ (1)ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ.

ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು. ಈ ಕೆಳಕಂಡಂತೆ ಆದೇಶಿಸಿದ.

ಸರ್ಕಾರದ ಆದೇಶ ಸಂಖ್ಯೆ: ಇಪಿ 230 ಪಿಬಿಎಸ್ 2024, ಬೆಂಗಳೂರು, ದಿನಾಂಕ: 07ನೇ ಅಕ್ಟೋಬರ್ 2024.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಮ್ಮ ಅಂದರೆ ಈ ಕೆಳಗೆ ವಿವರಿಸಲಾದಂತೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ.

ಶಿಕ್ಷಕರ

 

ಶಿಕ್ಷಕರ .

 

 

 

ಮುಂದುವರೆದು, ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ಪೂರ್ವ ಪ್ರಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಸದರಿ ಹುದ್ದೆಗಳಿಗೆ ತಗಲಬಹುದಾದ ಆರ್ಥಿಕ ಆಯವ್ಯಯವನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ.

ಸದರಿ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ: ಆಇ 389 ವೆಚ್ಚ-8/2024, ದಿನಾಂಕ: 03.10.2024ರಲ್ಲಿ ನೀಡಿರುವ ಅಭಿಪ್ರಾಯದನ್ವಯ ಹೊರಡಿಸಲಾಗಿದೆ.

 

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

M.A.Mahauku (ಎಂ.ಎ. ಮಹಾಲಕ್ಷ್ಮಿ) ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,

 

ಧನ್ಯವಾದಗಳು…
WhatsApp Group Join Now
Telegram Group Join Now

Leave a Comment