Scholorship Application:ಕೇಂದ್ರ ಸರ್ಕಾರದಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ(Scholorship) ಪಡೆಯಲು ಅರ್ಜಿ ಆಹ್ವಾನ.
Scholorship Application:ಕೇಂದ್ರ ಸರ್ಕಾರದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶುಭ ಸುದ್ದಿ! ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್(School student scholarship 2025)ಈ ಯೋಜನೆಯ ಅಡಿಯಲ್ಲಿ ರಾಜ್ಯದ ವಿವಿಧ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ 25,000 ರೂ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಮೋದಿ ಸರ್ಕಾರವು(Education aid scheme) ಈ ಯೋಜನೆಯನ್ನು ಜಾರಿಗೆ ತರಲು ಉದ್ದೇಶವೇನೆಂದರೆ, ದೇಶದ ಪ್ರತಿಯೊಂದು ಗ್ರಾಮಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕವಾಗಿ ಸಹಾಯವನ್ನು ಮಾಡುವುದರ ಮೂಲಕ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪ್ರಸ್ತುತ ಈ ಲೇಖನದಲ್ಲಿ ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ಪ್ರಮುಖ ವಿಧಾನ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಯಾವವು? ಈ ಯೋಜನೆಯನ್ನು ಜಾರಿಗೆ ತರಲು ಸರ್ಕಾರದ ಪ್ರಮುಖ ಉದ್ದೇಶವೇನು? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.
Purpose Of This Scheme- ಈ ಯೋಜನೆಯ ಪ್ರಮುಖ ಉದ್ದೇಶ ಏನು?
ಆರ್ಥಿಕವಾಗಿ ಹಿಂದುಳಿದ ದೇಶದ ಎಲ್ಲಾ ಕುಟುಂಬಗಳಲ್ಲಿ ಬೆಳೆದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಇದರ ಮುಖ್ಯ ಉದ್ದೇಶವಿದ್ದಾಗಿದೆ. ಶಾಲೆ ಬಿಡುವಿಕೆ, ಶಿಕ್ಷಣದಲ್ಲಿ ಹಿಂದಿಜಾರುವುದು ಹಾಗೂ ಬಡತನದಿಂದಾಗಿ ಓದನ್ನು ನಿಲ್ಲಿಸುವಂತಹ ಪರಿಸ್ಥಿತಿಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಹಾಗೆಯೇ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕತೆಯನ್ನು ಬೆಳೆಸುವುದು, ವಿದ್ಯಾರ್ಥಿಗಳಲ್ಲಿನ ಶೈಕ್ಷಣಿಕ ಉತ್ಸಾಹವನ್ನೂ ಉತ್ತೇಜಿಸುವುದು ಇದರ ಮತ್ತೊಂದು ಗುರಿಯಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31/10/2025
Who Can Apply- ಈ ವಿದ್ಯಾರ್ಥಿವೇತನಕ್ಕೆ ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ?
• ಅರ್ಜಿದಾರ ವಿದ್ಯಾರ್ಥಿಗಳು 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
• ವಿದ್ಯಾರ್ಥಿಯೂ ಶೇ.75 ಹಾಗೂ ಹೆಚ್ಚು ಹಾಜರಾತಿಯನ್ನು ಹೊಂದಿರಬೇಕು.
• ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ತಲಾ ಆದಾಯವು ₹2 ಲಕ್ಷ ಮೀರಿರಬಾರದು.
• ವಿದ್ಯಾರ್ಥಿಯೂ ಸರ್ಕಾರಿ, ಅನುದಾನಿತ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
Subsidy Amount- ಅರ್ಹ ಫಲಾನುಭವಿಗಳಿಗೆ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?
ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳುವ ಅರ್ಹ ವಿದ್ಯಾರ್ಥಿಗಳಿಗೆ ತಲಾ ರೂ.25,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ವೇತನದಲ್ಲಿ ಶಾಲಾ ಶುಲ್ಕ, ಪಠ್ಯಪುಸ್ತಕಗಳು, ಸಮವಸ್ತ್ರ, ಪಡಿತರ ಸಾಮಗ್ರಿಗಳು ಮುಂತಾದವುಗಳು ಒಳಗೊಂಡಿರುತ್ತದೆ.
How To Apply-ವಿದ್ಯಾರ್ಥಿವೇತನ ಪಡೆಯಲು ಅರ್ಜಿಯನ್ನು ಸಲ್ಲಿಸಲು ಅನುಸರಿಸಬೇಕಾದ ವಿಧಾನ.
ಈ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ನೀಡಿರುವ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
• 1:- ಮೊದಲಿಗೆ ಈ ಲಿಂಕ್ “Click Here” ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
• 2:- ಆ ನಂತರ ಈ ವೆಬ್ಸೈಟ್ ಗೆ ಮೊದಲ ಬಾರಿಗೆ ಭೇಟಿ ಮಾಡುತ್ತಿರುವವರು ಈ ಪೇಜ್ ನಲ್ಲಿ ಕಾಣುವ “Register Here” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ಐಡಿಯನ್ನು ರಚಿಸಿಕೊಳ್ಳಬೇಕು. ಅದಾದ ನಂತರ ಅರ್ಜಿದಾರರ ಐಡಿ ಮತ್ತು OTP ಅನ್ನು ನಮೂದಿಸಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
• 3:- ತದನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡುವ ಮೂಲಕ ಕೊನೆಯಲ್ಲಿ ಅಗತ್ಯ ವಿರುವ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಮುಕ್ತಾಯಗೊಳ್ಳುತ್ತದೆ.
- Read more…
ನೀವು ಆದಾಯ ತೆರಿಗೆ(Income tax returns) ವಿವರ ಸಲ್ಲಿಸುವುದು ಹೇಗೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
Documents-ಅರ್ಜಿಯನ್ನು ಸಲ್ಲಿಸಲು ಅತ್ಯಂತ ಪ್ರಮುಖ ದಾಖಲಾತಿಗಳು.
• ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar card
• ಜಾತಿ ಪ್ರಮಾಣ ಪತ್ರ/Cast Certificate
• ಆದಾಯ ಪ್ರಮಾಣ ಪತ್ರ/Income Certificate
• ಬ್ಯಾಂಕ್ ಪಾಸ್ ಬುಕ್/Bank passbook
• ಮೊಬೈಲ್ ನಂಬರ್/Mobile number