School education:2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.
ಉಲ್ಲೇಖ: ಈ ಕಛೇರಿ ಸುತ್ತೋಲೆ ಸಮಸಂಖ್ಯೆ ದಿನಾಂಕ:16.08.2024.
School education: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 05.09.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:20.09.2024 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ), ಸಂಬಂಧಿಸಿದ ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ಮಾಹಿತಿಯನ್ನು ನೀಡುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.
ಪ್ರತಿಯನ್ನು ಅಗತ್ಯ ಕ್ರಮಕ್ಕಾಗಿ:-
1. ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ರವರಿಗೆ,
2. ರಾಜ್ಯದ ಎಲ್ಲಾ ಉಪನಿರ್ದೇಶಕರು (ಅಭಿವೃದ್ಧಿ) ರವರಿಗೆ,
3. NMMS ಪರೀಕ್ಷೆಗಳಿಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೆ,
4. ಎಲ್ಲಾ ಬ್ಲಾಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ,
5. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ (ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ)
6. ಶಾಖಾಧಿಕಾರಿಗಳು, ಗಣಕ ಶಾಖೆ, ಕೆ.ಎಸ್.ಇ.ಇ.ಬಿ ರವರಿಗೆ.
ಪ್ರತಿಯನ್ನು ಗೌರವಪೂರ್ವಕವಾಗಿ ಮಾಹಿತಿಗಾಗಿ:-
1. ಮಾನ್ಯ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರಿಗೆ.
2. ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರ್ಗಿ ಮತ್ತು ಧಾರವಾಡ ರವರಿಗೆ
3. ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಬೆಂಗಳೂರು ರವರಿಗೆ 4. ನಿರ್ದೇಶಕರು, ಪ್ರಾಥಮಿಕ ಶಿಕ್ಷಣ, ಆಯುಕ್ತರ ಕಛೇರಿ, ಬೆಂಗಳೂರು ರವರಿಗೆ.
5. ನಿರ್ದೇಶಕರು, ಪ್ರೌಢ ಶಿಕ್ಷಣ, ಆಯುಕ್ತರ ಕಛೇರಿ, ಬೆಂಗಳೂರು ರವರಿಗೆ
6. ಕಛೇರಿ ಪ್ರತಿ.
Click here….