SSLC 2025-26: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ(SSLC) ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳ ನೋಂದಣಿ ಮಾರ್ಗಸೂಚಿ ಎಲ್ಲಾ ಪುಟಗಳನ್ನು ಕಡ್ಡಾಯವಾಗಿ ಓದಿ ಮನನ ಮಾಡಿಕೊಳ್ಳುವುದು.
SSLC 2025-26: 2026ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2026ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF) ವಿವರಗಳನ್ನು ಮಂಡಳಿಯ https://kseeb.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್ ಲೋಡ್ ಮಾಡಲು ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ನೋಂದಣಿಗೆ ಅಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ನಿಗಧಿಪಡಿಸಿದ ದಿನಾಂಕದಲ್ಲಿ ಶಾಲಾ ಲಾಗಿನ್ ನಲ್ಲಿ ವಿದ್ಯಾರ್ಥಿಗಳ ನೋಂದಣಿಯನ್ನು ಮಾಡುವುದು.
ಈ ಸಾಲಿನಿಂದ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಯನ್ನು ನೇರವಾಗಿ ಅಭ್ಯರ್ಥಿಗಳೇ ಮಂಡಲಿ ಜಾಲತಾಣದಲ್ಲಿ ನೋಂದಾಯಿಸಬಹುದಾಗಿದ್ದು, ಈ ಕುರಿತ ಮಾರ್ಗಸೂಚಿಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.
1. ಆಡಳಿತ ವಿಭಾಗ
ಖಾಸಗಿ ಪ್ರೌಢಶಾಲೆಗಳ ನೋಂದಣಿ ಮತ್ತು ಮಾನ್ಯತೆ :-
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ- 1966 Chapter VI -ನಿಯಮ 36 ಮತ್ತು 37ರನ್ವಯ ಮಾನ್ಯತೆ ಪಡೆದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಾತ್ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿರುತ್ತದೆ.
• ಕರ್ನಾಟಕ ಶಿಕ್ಷಣ ಕಾಯ್ದೆ-1983 20-30, 31, 33, 36 № 38 ಹಾಗೂ ಅನುದಾನರಹಿತ ಪ್ರೌಢಶಾಲೆಗಳು ನೋಂದಣಿ ಮತ್ತು ಮಾನ್ಯತೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಹಾಗೂ ಪ್ರೌಢಶಾಲೆಯಲ್ಲಿ ಬೋಧನೆ ಮಾಡುವ ಮಾಧ್ಯಮಗಳಿಗನುಗುಣವಾಗಿ ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆಯು ನವೀಕರಣವಾಗಿರಬೇಕು.
• 2025-26ನೇ ಸಾಲಿನ ಮಾನ್ಯತೆ ನವೀಕರಣವನ್ನು ಸಕ್ಷಮ ಪ್ರಾಧಿಕಾರದಿಂದ ಸಕಾಲದಲ್ಲಿ ಪಡೆದುಕೊಳ್ಳುವುದು.
• Read more… ಅರಣ್ಯ ಪಾಲಕ (Beat Forester) ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ 1:1 List ಇದೀಗ ಪ್ರಕಟಗೊಂಡಿದೆ.
• ಅಂತಿಮ ಪ್ರದೇಶ ಪತ್ರವನ್ನು ಮಂಡಲಿಯಿಂದ ಶಾಲೆಗಳಿಗೆ ವಿತರಿಸುವ ಅವಧಿಯೊಳಗೆ 2025-26ನೇ ಸಾಲಿನ ಮಾನ್ಯತೆ ನವೀಕರಣ ಹೊಂದುವುದು ಕಡ್ಡಾಯವಾಗಿರುತ್ತದೆ. ಇಲ್ಲವಾದಲ್ಲಿ ಅಂತಹ ಶಾಲೆಗಳ ಫಲಿತಾಂಶವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರಿ ಅಥವಾ ಮಾನ್ಯತೆ ಪಡೆದ ಅನುದಾನಿತ ಪ್ರೌಢಶಾಲೆಗಳ ಮುಖಾಂತರ ಫಲಿತಾಂಶ ಪ್ರಕಟಿಸಲಾಗುವುದು,