SSLC EXAM: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಸ್ತಾವ ಇನ್ನೂ ಮುಂದೆ ಎಸ್ಸೆಸ್ಸೆಲ್ಸಿ (SSLC EXAM )ತೇರ್ಗಡೆಗೆ 33 ಅಂಕ.

SSLC EXAM: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಸ್ತಾವ ಇನ್ನೂ ಮುಂದೆ ಎಸ್ಸೆಸ್ಸೆಲ್ಸಿ (SSLC EXAM )ತೇರ್ಗಡೆಗೆ 33 ಅಂಕ.

SSLC EXAM

SSLC EXAM:ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮಕ್ಕಳು -ಇನ್ನೂ ಮುಂದೆ ಕೇಂದ್ರೀಯ ಪ್ರೌಢ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ(SSLC EXAM) ಎದುರಿಸಲಿದ್ದಾರೆ.

ಸಿಬಿಎಸ್ಇ ( CBSE) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕಗಳೂ ಸೇರಿ ಒಟ್ಟಾರೆ ಶೇ 33 ಅಂಕ ಪಡೆದರೂ ತೇರ್ಗಡೆಯಾಗುತ್ತಾರೆ. ಪ್ರತಿ ವಿಷಯಕ್ಕೂ 20 ಆಂತರಿಕ ಅಂಕಗಳಿದ್ದು, 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. 2 ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಣರಾಗುತ್ತಾರೆ. ಇದೇ ರೀತಿಯ ಮಾದರಿಯನ್ನು -ಎಸ್‌ಎಸ್ಎಲ್‌ಸಿಯಲ್ಲೂ ಅಳವಡಿಸಲು ರಾಜ್ಯದ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯನಿರ್ಣಯ ಮಂಡಳಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ(SSLC EXAM) ಯಲ್ಲಿ ಕನ್ನಡ ಸೇರಿ ಪ್ರಥಮ ಭಾಷೆಯನ್ನು 125ಕ್ಕೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತದೆ. ಇದರಲ್ಲಿ ಪ್ರಥಮ ಭಾಷೆ 25 ಹಾಗೂ ಉಳಿದ ಇತರೆ ವಿಷಯಗಳಲ್ಲಿ ತಲಾ 20 ಅಂಕಗಳು ಅಂತರಿಕ ಮೌಲ್ಯಮಾಪನಕ್ಕೆ ನಿಗದಿ ಮಾಡಲಾಗಿದೆ. CBSE ಮಾದರಿಯ ಹೊಸ ನಿಯಮ ಜಾರಿಯಾದರೆ ಒಬ್ಬ ವಿದ್ಯಾರ್ಥಿ ಒಂದು ವಿಷಯದಲ್ಲಿ 20 ಅಂತರಿಕ ಅಂಕ ಪಡೆದರೆ, ಲಿಖಿತ ಪರೀಕ್ಷೆಯಲ್ಲಿ 13 ಬಂದರೂ ಸಾಕು ಆ ವಿಷಯದಲ್ಲಿ ತೇರ್ಗಡೆಯಾಗುತ್ತಾನೆ. 35 ಅಂಕ ಕಡ್ಡಾಯ.
ಈಗಿರುವ ಪರೀಕ್ಷಾ ನಿಯಮದ ಪ್ರಕಾರ ಒಬ್ಬ ವಿದ್ಯಾರ್ಥಿ ಉತ್ತೀರ್ಣರಾಗಲು ಶೇ 35 ಅಂಕಗಳನ್ನು ಪಡೆಯಬೇಕು.

SSLC EXAM ಪ್ರಥಮ ಭಾಷೆ, 125ರ ಬದಲು 100ಕ್ಕೆ

ಕನ್ನಡ ಸೇರಿದಂತೆ SSLC ಪ್ರಥಮ ಭಾಷಾ ಪರೀಕ್ಷೆಯ(EXAM) ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯನಿರ್ಣಯಮಂಡಳಿ ನಿರ್ಧರಿಸಿದೆ.

2026ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯುವ ಎಸ್ಎಸ್‌ಎಲ್‌ಸಿ ಪರೀಕ್ಷೆ(SSLC EXAM) ಯಲ್ಲಿ ಇತರೆ 5 ವಿಷಯಗಳಂತೆ ಕನ್ನಡಕ್ಕೂ 100 ಅಂಕ ಇರುತ್ತದೆ. ಒಟ್ಟಾರೆ ಅಂಕಗಳು 600ಇರುತ್ತವೆ. ಇದುವರೆಗೂ 625 ಅಂಕಗಳು ಇದ್ದವು. ಪ್ರತಿ ವಿಷಯದಲ್ಲೂ 20 ಅಂಕ ಅಂತರಿಕ ಮೌಲ್ಯಮಾಪನ ಮತ್ತು 80 ಅಂಕಲಿಖಿತ ಪರೀಕ್ಷೆ ಒಳ ಗೊಂಡಿರುತ್ತದೆ. ನಿವೃತ್ತ ಪ್ರಾಧ್ಯಾಪಕ ಗಣೇಶ್ ಭಟ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಪರೀಕ್ಷೆ ಸುಧಾರಣಾ ಸಮಿತಿಯು, ಮುಂಬರುವ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ(SSLC EXAM) ಒಂದು ಅಂಕದ, ಬಹು ಆಯ್ಕೆಯ ಪ್ರಶ್ನೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸಲು, ಪ್ರತಿ ವಿಭಾಗದಲ್ಲೂ ಹೆಚ್ಚು ಪ್ರಶ್ನೆಗಳನ್ನು ನೀಡಿ, ಯಾವುದಾದರೂ ಎರಡು, ಮೂರು, ನಾಲ್ಕು ಪ್ರಶ್ನೆಗಳನ್ನು ಆಯ್ಕೆ ಮಾಡಿಕೊಂಡು ಉತ್ತರ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲು ಸಮಿತಿ ಚರ್ಚೆ ನಡೆಸಿದೆ.

SSLC EXAM:COVID ಅವಧಿಯ ರದ್ದತಿ.

ಕೋವಿಡ್ ಅವಧಿಯಲ್ಲಿನ ಕಲಿಕಾ ನಷ್ಟ ಸರಿದೂಗಿಸಲು ಕೃಪಾಂಕ ನೀಡುವ ಪದ್ಧತಿ ಆರಂಭಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆ(SSLC EXAM) ಯಲ್ಲಿ ಮೂರು ವಿಷಯಗಳಲ್ಲಿ 35 ಅಂಕ ಪಡೆದಿದ್ದು, ಉಳಿದ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೆ ಪ್ರತಿ ವಿಷಯದಲ್ಲೂ ಗರಿಷ್ಠ 10 ಕೃಪಾಂಕ ನೀಡಿ ತೇರ್ಗಡೆ ಮಾಡಲಾಗುತ್ತಿತ್ತು.

2024ರಲ್ಲಿ ವೆಬ್‌ಕಾಸ್ಟಿಂಗ್‌ ಪರಿಚಯಿಸಿದ ನಂತರ ಕೃಪಾಂಕ ಪಡೆಯಲು ಇದ್ದ ಶೇ 35 ಅರ್ಹ ಅಂಕಗಳನ್ನು 25ಕ್ಕೆ ಇಳಿಸಿ, ಗರಿಷ್ಠ 20 ಕೃಪಾಂಕ ನೀಡಲಾಗಿತ್ತು. ಇದರಿಂದ ಪರೀಕ್ಷೆ ಬರೆದಿದ್ದ8.59 ಲಕ್ಷ ವಿದ್ಯಾರ್ಥಿ ಗಳಲ್ಲಿ 1.69 ಲಕ್ಷ ವಿದ್ಯಾರ್ಥಿಗಳು ಕೃಪಾಂಕದ ಆಧಾರದಲ್ಲೇ ತೇರ್ಗಡೆ ಯಾಗಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ನಂತರ 20 ಕೃಪಾಂಕ ಕೈಬಿಟ್ಟು, ಹಿಂದಿನಂತೆ 10 ಕೃಪಾಂಕ ಮುಂದುವರಿಸಲಾಗಿತ್ತು. ಮುಂಬರುವ ಪರೀಕ್ಷೆಯಲ್ಲಿ ಸಿಬಿಎಸ್‌ಇಮಾದರಿ ಅಳವಡಿಕೆಯಿಂದಾಗಿ ಕೃಪಾಂಕ ಪದ್ಧತಿ ಸಂಪೂರ್ಣ ಸ್ಥಗಿತವಾಗಲಿದೆ.

PEPAR NEW – CLICK HERE
WhatsApp Group Join Now
Telegram Group Join Now