State Government: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳ ಪರಿಷ್ಕರಣೆ.-2024.
ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರಲ್ಲಿ ಓದಲಾದ ದಿನಾಂಕ: 22.07.2024ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ.
ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿ ಮೇಲೆ (2)ರಲ್ಲಿ ಓದಲಾದ ಆದೇಶದಲ್ಲಿ ಅಂಗೀಕರಿಸಿರುವಂತೆ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಪರಿಷ್ಕರಿಸಿ ಈ ಕೆಳಕಂಡಂತೆ ಆದೇಶಗಳನ್ನು ಹೊರಡಿಸಲು ಸರ್ಕಾರವು ಹರ್ಷಿಸುತ್ತದೆ.
ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/262/2024 ಬೆಂಗಳೂರು, ದಿನಾಂಕ : 28.08.2024
ರಾಜ್ಯ ಸರ್ಕಾರವು ರಚಿಸಿದ 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.
Click here…
ಧನ್ಯವಾದಗಳು…….