Teachers Day: ಶಿಕ್ಷಕರ ದಿನಾಚರಣೆಗೆ ಹಿಂದೇಟು? -2024.
ಪ್ರಾಥಮಿಕ ಶಾಲಾ ಶಿಕ್ಷಕರಿಂದ ಅಪಸ್ವರ |ವಿವಿಧ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆ ನಿರ್ಧಾರ.
ರಾಜ್ಯ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ಹಲವು ಬೇಡಿಕೆಗಳು ಈಡೇರಿಸದ ಹಿನ್ನೆಲೆಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಣ ಇಲಾಖೆ ಆಚರಿಸುವ ಶಿಕ್ಷಕರ ದಿನವನ್ನು ಬಹಿಷ್ಕರಿಸುವ ಮಾತುಗಳು ಶಿಕ್ಷಕ ವಲಯದಿಂದಲೇ ಕೇಳಿಬರುತ್ತಿದೆ.
ದೇಶದಾದ್ಯಂತ ಸೆ.5ರಂದು ಶಿಕ್ಷಕರ ದಿನವನ್ನು ಆಚರಣೆ ಮಾಡ ಲಾಗುತ್ತದೆ. ಅದರಂತೆ ಜಿಲ್ಲಾ ಮಟ್ಟದಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನ ಆಚರಿಸಲು ಮುಂದಾಗಿರುವ ಶಿಕ್ಷಣ ಇಲಾಖೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಅಪಸ್ವರ ಕೇಳಿಬಂದಿದೆ. ವಿ ಶೇ ಷ ಕಾ ರಾಜ್ಯ ಸರ್ಕಾರ ಪ್ರಾಥ ಮಿಕ ಶಾಲಾ ಶಿಕ್ಷಕರ ಬೇಡಿಕೆ ಗಳನ್ನು ಈಡೇ ರಿಸದ ಹೊರತು, ಶಿಕ್ಷಕರ ದಿನವನ್ನು ಆಚರಣೆ ಮಾಡುವುದು ಬೇಡ ಎಂಬ ನಿರ್ಧಾರವನ್ನು ಕೈಗೊಂಡಿ ದ್ದಾರೆ. ಈ ಸಂಬಂಧ ಚಾಮರಾಜನಗರ ಕ್ಷೇತ್ರ ಶಿಕ್ಷಣಾಧಿಕಾರಿ ಹನು ಮಂತ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಸಮಾಧಾನ ಹೊರಹಾಕಿರುವ ಪ್ರಾಥಮಿಕ ಶಾಲಾ ಶಿಕ್ಷಕರು, 2024-25ನೇ ಸಾಲಿನ ಶಿಕ್ಷಕರ ದಿನಾಚರಣೆಯಿಂದ ಹೊರಗುಳಿ ಯಲು ತೀರ್ಮಾನಿಸಿದ್ದಾರೆ. ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಈಗಾಗಲೇ ಅ.12ರಂದು ಬೆಂಗಳೂರು ಚಲೋ ಕೈಗೊಂಡು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನಾ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗವಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಮುಂಬರುವ ಶಿಕ್ಷಕರ ದಿನಾಚರಣೆ ಒಳಗಾಗಿ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ್ದರು.
ಆದರೆ ಈವರೆಗೂ ಯಾವುದೇ ಕ್ರಮವಹಿಸಿಲ್ಲ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಕರ ಜತೆಗೆ ಮಾತುಕತೆ ನಡೆಸುವುದಾಗಿ ಸಮಯ ನಿಗದಿಗೊಳಿಸಿದ್ದಾರೆ. ಈ ನಡುವೆಯೂ ಶಿಕ್ಷಕರು ತಮ್ಮ ಸಮಸ್ಯೆಗಳು ಬಗೆಹರಿಯದೆ ಶಿಕ್ಷಕರ ದಿನವನ್ನು ಆಚರಣೆ ಮಾಡುವುದಿಲ್ಲ ಎಂಬ ಸಂದೇಶ ವನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಇದು ಚಾಮರಾಜನಗರವಲ್ಲದೆ ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ಇನ್ನಿತರ ಜಿಲ್ಲೆಗಳಿಗೂ ವಿಸ್ತಾರಗೊಳ್ಳುವ ಸಾಧ್ಯತೆಗಳು ಇದೆ ಎಂದು ಹೇಳಲಾಗುತ್ತಿದೆ.
ಬೇಡಿಕೆಗಳೇನು?
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು 2017ರವರೆಗೆ ನೇಮಕವಾದ ಶಿಕ್ಷಕರನ್ನು 1-7ನೇ ತರಗತಿಗೆ ನೇಮಕವಾದ ಶಿಕ್ಷಕರು ಎಂದು ಪರಿಗಣಿಸಬೇಕು. 2017ರ ಸಿ ಆ್ಯಂಡ್ ಆರ್ ನಿಯಮಗಳು 2016ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲವೆಂದು ಕಾರ್ಯಾದೇಶ ಹೊರಡಿಸಬೇಕು. 1ರಿಂದ 7/8ಕ್ಕೆ ನೇಮಕಗೊಂಡವರನ್ನು ಪಿಎಸ್ಟಿ ಎಂದು ಪದನಾಮಮಾಡಿ 1-5ನೇ ತರಗತಿಗೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಗೊಂಡವರಿಗೆ ಹಿಂದಿನಂತೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯಶಿಕ್ಷಕರು ಹಾಗೂ ಹಿರಿಯ ಮುಖ್ಯಶಿಕ್ಷಕರ ಹುದ್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ ಹೊಂದಿದ 2016ಕ್ಕಿಂತ ಮೊದಲು ನೇಮಕಗೊಂಡಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕು ಎಂಬುದು ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯಾಗಿದೆ.
ನಿರಂತರ ಹೋರಾಟ.
ಪ್ರಾಥಮಿಕ ಶಾಲಾ ಶಿಕ್ಷಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.5 ರಂದು ತಾಲೂಕು ಮಟ್ಟದಲ್ಲಿ, ಆ.7ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ ಅ.12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿಕೊಂಡು ಬಂದಿದ್ದಾರೆ. 2024-25ನೇ ಸಾಲಿನ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕರಿಸುವ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲೂ ಈ ಹೋರಾಟ ತೀವ್ರವಾಗುವ ಸಾಧ್ಯತೆ ಇದ್ದು, ಪ್ರಾಥಮಿಕ ಶಾಲಾ ಮಕ್ಕಳ ಮೇಲೆ ಪರಿ ಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.
ಧನ್ಯವಾದಗಳು…..
ಸ್ನೇಹಿತರೇ ದಯವಿಟ್ಟು ನಮ್ಮ WhatsApp and Telegram Follow ಮಾಡಿ. . . . .