Teachers Recruitment: ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ-2024.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರೆ ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ . ಪ್ರತಿದಿನ ನಾವು ಹಾಕುವ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.
Teachers Recruitment: ಕಲ್ಯಾಣ ಕರ್ನಾಟಕದ ಭಾಗಕ್ಕೆ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಮಧು ಬಂಗಾರಪ್ಪ ತಿಳಿಸಿದರು.
ಮಕ್ಕಳ ಪೌಷ್ಟಿಕತೆಯನ್ನು ವೃದ್ಧಿಸುವ ಸಲುವಾಗಿ ಹಮ್ಮಿಕೊಂಡಿದ್ದ ಮೊಟ್ಟೆ ವಿತರಣೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇ 80 ರಷ್ಟು ಶಿಕ್ಷಕರ ಹುದ್ದೆಗಳ ಭರ್ತಿ ಮಾಡಲಾಗುವುದು. ಮೂರನೇ ಶನಿವಾರ ಬ್ಯಾಗ್ ಇಲ್ಲದೆ ದಿನವನ್ನು ಮಾಡಿದ್ದು, ಡಿಡಿಪಿಐಯವರು ಅನುಷ್ಠಾನ ಮಾಡುತ್ತಾರಾ ಇಲ್ಲವಾ ಗಮನಿಸಬೇಕು ಎಂದು ಸೂಚಿಸಿದರು.
40 ದಿನದಲ್ಲಿ 40 ಸಾವಿರ ಮಕ್ಕಳು ಎಲ್ ಕೆ ಜಿ ಗೆ ದಾಖಲಾಗಿದ್ದಾರೆ. ಇದು ಒಂದು ಸಾಧನೆಯಾಗಿದೆ ಎಂದರು.
ಮುಂದಿನ 10 ವರ್ಷಗಳಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಸೇರಿದಂತೆ ಶೈಕ್ಷಣಿಕ ಮಟ್ಟದಲ್ಲಿ ಮುಂದೆ ಬರುತ್ತದೆ. ಅಕ್ಷರ ಆವಿಷ್ಕಾರ ಯೋಜನೆಯಡಿ ಈ ಭಾಗದ ಶಾಸಕರು ಶೇ 25 ರಷ್ಟು ಅನುದಾನ ತೆಗೆದಿಸಿದ್ದಾರೆ. ಇದರಿಂದ ಬಹಳಷ್ಟು ಮಕ್ಕಳಿಗೆ ಅನುಕೂಲವಾಗುತ್ತಿದೆ ಎಂದರು.
ಶಿಕ್ಷಕರ ನೇಮಕಾತಿಯ ಕುರಿತು ಶಿಕ್ಷಣ ಸಚಿವರು ಶ್ರೀಮಾನ್ಯ ಶ್ರೀ ಮಾನ್ಯ ಮಧು ಬಂಗಾರಪ್ಪ ಹೇಳಿರುವ ಮಾತು.
ರಾಜ್ಯದ 25 ಸಾವಿರ ಮಕ್ಕಳಿಗೆ ನೀಟ್ ಕೋಚಿಂಗ್ ನೀಡಲಾಗುತ್ತದೆ. ತಂದೆ ತಾಯಿ ಮಕ್ಕಳನ್ನು ಶಾಲೆಗೆ ಕಳುಹಿಸಿ. ಶಾಲೆಯಲ್ಲಿ ಮಕ್ಕಳು ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ. ಈ ಹಿಂದೆ ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಶಾಲೆಗೆ ಮಕ್ಕಳು ಬರಲು ₹1 ನೀಡುತ್ತಿದ್ದರು. ಅದರಂತೆ ನಮ್ಮ ಸರ್ಕಾರ ಮಕ್ಕಳಿಗೆ 6 ದಿನವೂ ಮೊಟ್ಟೆ ವಿತರಿಸಲಾಗುತ್ತದೆ. ಜೊತೆಗೆ ಬಿಸಿಯೂಟ, ಸಮವಸ್ತ್ರ, ಶೂ, ಪಠ್ಯಪುಸ್ತಕ ನೀಡಲಾಗುತ್ತದೆ ಎಂದು ತಿಳಿಸಿದರು.
ಧನ್ಯವಾದಗಳು…..
1 thought on “Teachers Recruitment: ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ-2024.”