ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024.
ಹಾಯ್ ಗೆಳೆಯರೆ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಅಂಗನವಾಡಿ ಸೇರಿದಂತೆ ಶಾಲೆಗಳು-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.
ಬೆಂಗಳೂರು, ಜುಲೈ 18: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಬ್ಬರ (Rain) ಜೋರಾಗುತ್ತಿದೆ. ಉಡುಪಿ ಮತ್ತು ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಹಲವೆಡೆ ಶಾಲೆಗಳು-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 18) ಕೂಡ ಜಿಲ್ಲಾಧಿಕಾರಿಗಳು, ಡಿಡಿಪಿಐಗಳು ರಜೆ (holiday) ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ?
ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು. 19 ಮತ್ತು 20ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಿ ಆಯಾ ತಾಲೂಕಿನ ತಹಶೀಲ್ದಾರ್‌ಗಳಿಂದ ಆದೇಶಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆ ಆರ್ಭಟಿಸಿದ್ದು ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ನಗರ, ಅಂಬಳೆ ಹೋಬಳಿ, ಲಕ್ಯಾ ಹೋಬಳಿ ಹೊರತು ಪಡಿಸಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ನಾಳೆಯೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ನಾಳೆ ರಜೆ ಘೋಷಿಸಿ ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಐಟಿಐ, ಯುಜಿ, ಪಿಜಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ. ಇನ್ನು ಕೊಡಗಿನಲ್ಲೂ ಭಾರಿ ಗಾಳಿ ಮಳೆ ಮುಂದುವರೆದಿದ್ದು ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ ನಾಳೆ ಒಂದು ದಿನ ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಘೋಷಣೆ ಮಾಡಿದ್ದಾರೆ.
ಧನ್ಯವಾದಗಳು….
- https://mahitikannada.com/those-who-send-money-through-phone-pay-google-pay-paytium-upi-beware-a-huge-loss-can-be-caused-by-this-small-mistake-2024/
- https://mahitikannada.com/after-the-implementation-of-the-7th-pay-commission-what-facilities-will-be-available-along-with-the-salary-more-information-is-here-2024/