VAO Recruitment-2024 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಜಿಲ್ಲಾವಾರು ಅಂತಿಮ ಸ್ಕೋರ್ ಪಟ್ಟಿ ಇದೀಗ ಪ್ರಕಟ.
VAO Recruitment-2024 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಜಿಲ್ಲಾವಾರು ಅಂತಿಮ ಸ್ಕೋರ್ ಪಟ್ಟಿ ಇದೀಗ ಪ್ರಕಟ.
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ
ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 29.09.2024 ಮತ್ತು 26.10.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಪ್ರಕಟಿಸಲಾಗಿರುತ್ತದೆ ಹಾಗೂ ದಿನಾಂಕ 27.10.2024 ರಂದು ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಪ್ರಕಟಿಸಿ ದಿನಾಂಕ 28.11.2024 ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
ಅದರಂತೆ ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 2021 (ತಿದ್ದುಪಡಿ) ರಲ್ಲಿ ನಿರ್ದೇಶಿಸಿರುವಂತೆ, ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳು ಮತ್ತು ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಶೇ. 35 ರಷ್ಟು ಅಂಕಗಳನ್ನು ಗಳಿಸಿ ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಮಾತ್ರ ದಿನಾಂಕ 12.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ನಲ್ಲಿ ಪ್ರಕಟಿಸಲಾಗಿದೆ ಮತ್ತು ಸದರಿ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಸಂಬಂಧಪಟ್ಟ ಜಿಲ್ಲಾಧಿಕಾರಿಯವರು ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸುವರು.
ಜಿಲ್ಲಾವಾರು ಸ್ಕೋರ್ ಪಟ್ಟಿ ಡೌನ್ಲೋಡ್ ಮಾಡಲು–Click Here